ಶೀಘ್ರವೇ ರಾಜ್ಯದಲ್ಲಿ ‘ಭ್ರೂಣ ಹತ್ಯೆ’ ಕಾಯ್ದೆಗೆ ತಿದ್ದುಪಡಿ ; 5 ಲಕ್ಷ ದಂಡ, 5 ವರ್ಷ ಜೈಲು ಶಿಕ್ಷೆ ಫಿಕ್ಸ್

ಬೆಂಗಳೂರು: ‘ಭ್ರೂಣ ಹತ್ಯೆ’ ಕಾಯ್ದೆ ತಿದ್ದುಪಡಿ ಮಾಡಲು ಸರ್ಕಾರ ಚರ್ಚಿಸಿದ್ದು, ಈ ಮೂಲಕ ಆರೋಪಿಗಳಿಗೆ 5 ಲಕ್ಷದವರೆಗೆ ದಂಡ ವಿಧಿಸಿ 5 ಲಕ್ಷ ಜೈಲು ಶಿಕ್ಷೆ ವಿಧಿಸಲಾಗುತ್ತದೆ.

ಹೌದು, ಭ್ರೂಣ ಹತ್ಯೆ ತಡೆಗೆ ರಾಜ್ಯ ಮಟ್ಟದಲ್ಲಿ ಆರೋಗ್ಯ ಇಲಾಖೆ ಆಯುಕ್ತರ ನೇತೃತ್ವದಲ್ಲಿ ಕಾರ್ಯಪಡೆ ರಚಿಸಲು ನಿರ್ಧರಿಸಲಾಗಿದೆ.

ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು, ಆರೋಗ್ಯ ಇಲಾಖೆ ಅಧಿಕಾರಿಗಳನ್ನೊಳಗೊಂಡ ಕಾರ್ಯಪಡೆ ರಚಿಸಲಾಗುವುದು. ಈ ಕಾರ್ಯಪಡೆಗಳು ಭ್ರೂಣ ಹತ್ಯೆ ಪ್ರಕರಣಗಳ ವಿಚಾರದಲ್ಲಿ ಪಿಸಿಪಿಎನ್ಡಿಟಿ ಕಾಯ್ದೆ ಅಡಿ ಕಾರ್ಯ ನಿರ್ವಹಿಸಿ ಹೆಚ್ಚು ನಿಗಾ ವಹಿಸಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಭ್ರೂಣ ಹತ್ಯೆಗೆ ಈಗಿರುವ ಕಾಯ್ದೆಯಲ್ಲಿ ₹ 10 ಸಾವಿರ ದಂಡ, 3 ವರ್ಷ ಜೈಲು ಶಿಕ್ಷೆ ಇದೆ. ಇದನ್ನು ₹ 5 ಲಕ್ಷದವರೆಗೆ ದಂಡ ವಿಧಿಸಿ, 5 ವರ್ಷ ಜೈಲು ಶಿಕ್ಷೆ ವಿಧಿಸುವ ನಿಟ್ಟಿನಲ್ಲಿ ಕಾಯ್ದೆಗೆ ತಿದ್ದುಪಡಿ ತರುವ ಬಗ್ಗೆ ಸಭೆಯಲ್ಲಿ ಚರ್ಚಿಸಿದ್ದು, ಜಾಮೀನುರಹಿತ ಅಪರಾಧ ಎಂದು ಪರಿಗಣಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

Latest Indian news

Popular Stories