ನಾಳೆ ‘ರಾಜ್ಯಸಭಾ ಚುನಾವಣೆ’ ಹಿನ್ನಲೆ: ಇಂದಿನಿಂದ ಫೆ.28ರವರೆಗೆ ‘ವಿಧಾನಸೌಧ’ದ ಸುತ್ತ ‘ನಿಷೇಧಾಜ್ಞೆ’ ಜಾರಿ

ಬೆಂಗಳೂರು: ನಾಳೆ ಕರ್ನಾಟಕ ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ವಿಧಾನಸೌಧದಲ್ಲಿ ಮತಚಲಾವಣೆ ನಡೆಯಲಿದೆ. ಈ ಹಿನ್ನಲೆಯಲ್ಲಿ ಇಂದಿನಿಂದ ಫೆಬ್ರವರಿ.28ರವರೆಗೆ ವಿಧಾನಸೌಧದ ಸುತ್ತಮುತ್ತಲೂ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಈ ಕುರಿತಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರು ಆದೇಶ ಹೊರಡಿಸಿದ್ದು, ದಿನಾಂಕ 12-02-2024ರಿಂದ ವಿಧಾನಸೌಧದಲ್ಲಿ ಅಧಿವೇಶನ ಪ್ರಾರಂಭವಾಗಿದ್ದು, ದಿನಾಂಕ 26-02-2024 ಮತ್ತು 28-02-2024 ರಂದು ವಿಧಾನಸಭೆ ಮತ್ತು ವಿಧಾನ ಪರಿಷತ್ ಅಧಿವೇಶನವು ನಡೆಯಲಿರುವುದರಿಂದ ಮತ್ತು ದಿನಾಂಕ 27-02-2024 ರಂದು ವಿಧಾನಸೌಧದಲ್ಲಿ ರಾಜ್ಯಸಭೆಯ ದೈವಾರ್ಷಿಕ ಚುನಾವಣೆಯ ಮತದಾನ ನಡೆಯಲಿದೆ ಎಂದಿದ್ದಾರೆ.

ಈ ಸಮಯದಲ್ಲಿ ವಿವಿಧ ರಾಜಕೀಯ ಪಕ್ಷಗಳು, ವಿವಿಧ ಸಂಘಟನೆಗಳು ತಮ್ಮ ಬೇಡಿಕೆಗಳಿಗೆ ಒತ್ತಾಯಿಸಿ ಮೆರವಣಿಗೆ, ಪ್ರತಿಭಟನೆ, ಧರಣಿ, ಸತ್ಯಾಗ್ರಹ, ವಿಧಾನಸೌಧ ಮುತ್ತಿಗೆ, ಇತ್ಯಾದಿ ಪ್ರತಿಭಟನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಸಾಧ್ಯತೆ ಇರುತ್ತದೆ ಎಂದಿದ್ದಾರೆ.

ಹೀಗೆ ಮಾಡುವುದರಿಂದ ಅಧಿವೇಶನದ ಕಾರ್ಯಕಲಾಪಗಳಿಗೆ ಅಡಚಣೆ ಉಂಟಾಗುವುದಲ್ಲದೇ ಸಾರ್ವಜನಿಕರ ನೆಮ್ಮದಿಗೆ ಭಂಗ ಹಾಗೂ ಸುಗಮ ಸಂಚಾರಕ್ಕೆ ತೊಂದರೆಯಾಗುತ್ತದೆ ಎಂದು ಗುಪ್ತವಾರ್ತೆ ಮಾಹಿತಿಯಿಂದ ತಿಳಿದು ಬಂದಿದೆ ಎಂದು ಹೇಳಿದ್ದಾರೆ.

ಈ ಹಿನ್ನಲೆಯಲ್ಲಿ ದಿನಾಂಕ 26-02-2024ರಿಂದ ದಿನಾಂಕ 28-02-2024ರವರೆಗೆ ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಬೆಂಗಳೂರು ನಗರದ ವಿಧಾನಸೌಧದ ಕಟ್ಟದ ಸುತ್ತಲೂ ಎರಡು ಕಿಲೋಮೀಟರ್ ವ್ಯಾಪ್ತಿಯಲ್ಲಿ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.

Latest Indian news

Popular Stories