ಬೆಂಗಳೂರು: ಬಜೆಟ್ ಗೂ ಮುನ್ನವೇ ರಾಜ್ಯ ಸರ್ಕಾರದ ಗಮನ ಸೆಳೆಯಲು ಅನ್ನದಾತರು ವಿವಿಧ ಬೇಡಿಕೆಗಳನ್ನಿಟ್ಟುಕೊಂಡು ಇಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಿದ್ದಾರೆ.
ರೈತರ ಸಂಪೂರ್ಣ ಸಾಲ ಮನ್ನಾ ಸೇರಿದಂತೆ ಇತರೆ ಬೇಡಿಕೆಗಳನ್ನು ಈಡೇರಿಸುವ ಬಗ್ಗೆ ಗಮನ ಸೆಳೆಯಲು ಕಬ್ಬು ಬೆಳೆಗಾರ ಸಂಘ ಸೇರಿದಂತೆ ರಾಜ್ಯ ರೈತ ಒಕ್ಕೂಟಗಳು ಫೆ.6 ರಂದು ಇಂದು ಬೆಂಗಳೂರು ಚಲೋ ಚಳವಳಿ ಹಮ್ಮಿಕೊಂಡಿದೆ.
ಆಕಸ್ಮಿಕ, ಅಪಘಾತ ಸಾವು. ಆತ್ಮಹತ್ಯೆಗೆ ಒಳಗಾದ ಕುಟುಂಬಕ್ಕೆ ಐದು ಲಕ್ಷ ರು. ಪರಿಹಾರ ಸಿಗುತ್ತದೆ ಇದೇ ರೀತಿ ರಾಜ್ಯದಲ್ಲಿ ಜಾರಿಗೆ ತರಬೇಕು.ಬರಗಾಲ ಪೀಡಿತ ಪ್ರದೇಶದ ರೈತರಿಗೆ. ತಮಿಳುನಾಡಿಗೆ ನೀರು ಹರಿಸಿ ಕಾವೇರಿ ಅಚ್ಚುಕಟ್ಟು ರೈತರಿಗೆ ವಂಚನೆ ಮಾಡಿರುವ ಸರ್ಕಾರ ರೈತರಿಗೆ ಕೂಡಲೇ ಎಕರೆಗೆ 25 ಸಾವಿರ ಪರಿಹಾರ ನೀಡಬೇಕು.
ರೈತರು ಬೆಳೆದ ಎಲ್ಲಾ ಪೌಷ್ಠಿಕ ಸಿರಿಧಾನ್ಯಗಳನ್ನು ಉತ್ಪಾದನಾ ವೆಚ್ಚಕ್ಕೆ ಬೆಂಬಲ ಬೆಲೆ ಹೆಚ್ಚುವರಿ ಬೆಲೆ ನಿಗದಿ ಮಾಡಿ ಸರ್ಕಾರವೇ ಕಡ್ಡಾಯವಾಗಿ ಖರೀದಿಸುವ ವ್ಯವಸ್ಥೆ ಜಾರಿಗೆ ಬರಬೇಕು. ತೆಲಂಗಾಣ ರಾಜ್ಯದಲಿ ಕಾಂಗ್ರೆಸ್ ಸರ್ಕಾರ ರೈತರ ಸಾಲ ಮನ್ನಾ ಮಾಡಿರುವ ರೀತಿ ರಾಜ್ಯದಲ್ಲಿಯೂ ಸಾಲ ಮನ್ನಾ ಆಗಬೇಕು ಎಂಬ ಬೇಡಿಕೆ ಸೇರಿ ವಿವಿಧ ಬೇಡಿಕೆಗಳನ್ನಿಟ್ಟುಕೊಂಡು ಇಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಿದ್ದಾರೆ.