ಬೆಂಗಳೂರು: ಪ್ರಭಾವಿ ಲಿಂಗಾಯತ ಮತ್ತು ದಲಿತ ಸಮುದಾಯಗಳನ್ನು ಸೆಳೆಯಲು ಕರ್ನಾಟಕದ ಕಾಂಗ್ರೆಸ್ ಸರ್ಕಾರ ಗುರುವಾರ ಲೋಕಸಭಾ ಚುನಾವಣೆಗೆ ಮುಂಚಿತವಾಗಿ ಹಲವಾರು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಂಡಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ 18 ನೇ ಶತಮಾನದ ಸಮಾಜ ಸುಧಾರಕ ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಲಾಯಿತು.
ಇತ್ತೀಚೆಗೆ ಲಿಂಗಾಯತ ಮಠಾಧೀಶರ ನಿಯೋಗವೊಂದು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಬೇಕು ಎಂದು ಒತ್ತಾಯಿಸಿತ್ತು ಅದರ ಬೆನ್ನಲೇ ಈ ಆದೇಶ ಹೊರಬಿದಿದ್ದೆ.
ಇದಲ್ಲದೆ, ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲ್ಲೂಕನ್ನು “ರಾಣಿ ಚೆನ್ನಮ್ಮ ಕಿತ್ತೂರು ತಾಲ್ಲೂಕು” ಎಂದು ಮರುನಾಮಕರಣ ಮಾಡಲು ಕ್ಯಾಬಿನೆಟ್ ಒಪ್ಪಿಗೆ ನೀಡಿದೆ. ಮತ್ತೊಂದು ಪ್ರಮುಖ ನಿರ್ಧಾರದಲ್ಲಿ, ಹಿಂದಿನ ಬಿಜೆಪಿ ಸರ್ಕಾರವು ಪರಿಶಿಷ್ಟ ಜಾತಿ (ಎಸ್ಸಿ) ಸಮುದಾಯಕ್ಕೆ ನೀಡಿದ ಒಳ ಮೀಸಲಾತಿಯನ್ನು ಪರಿಶೀಲಿಸಲು 341 (3) ನೇ ವಿಧಿಯನ್ನು ತಿದ್ದುಪಡಿ ಮಾಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಕಳುಹಿಸಲು ಸರ್ಕಾರ ನಿರ್ಧರಿಸಿದೆ. ಸಭೆಯ ಬಳಿಕ ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ. ಮಹದೇವಪ್ಪ, “ನಾವು ಎಲ್ಲಾ ದಾಖಲೆಗಳನ್ನು ಸಂಗ್ರಹಿಸಿ ಎಜಿ ಮತ್ತು ಕಾನೂನು ಕಾರ್ಯದರ್ಶಿಗಳು, ಇತರ ಕಾನೂನು ತಜ್ಞರೊಂದಿಗೆ ಚರ್ಚಿಸಿದ್ದೇವೆ ಮತ್ತು ಇಂದು (ಗುರುವಾರ) ನಾವು ನಿರ್ಧಾರ ತೆಗೆದುಕೊಂಡಿದ್ದೇವೆ ಅಂತ ತಿಳಿಸಿದರು