ರಾಜ್ಯದ ಐ.ಟಿ ಕಂಪನಿಗಳಿಗೆ ಕೇರಳ ಗಾಳ ಹಾಕುತ್ತಿರುವುದು ಖಂಡನೀಯ:ಸಚಿವ ಎಂ.ಬಿ.ಪಾಟೀಲ್

ಬೆಂಗಳೂರು: ಬರಗಾಲ ಮತ್ತು ಬೇಸಿಗೆಗೆ ನಮ್ಮ ದೇಶವೂ ಸೇರಿದಂತೆ ಜಗತ್ತಿನ ಹಲವೆಡೆ ನೀರಿನ ಕೊರತೆ ಉಂಟಾಗಿರುವುದು ನಿಸರ್ಗ ಸಹಜ ವಿದ್ಯಮಾನದ ಪರಿಣಾಮವಾಗಿದೆ. ಇದಕ್ಕೆ ಕೇರಳವೂ ಹೊರತಲ್ಲ. ಈ ಸಂದರ್ಭದಲ್ಲಿ ಅಲ್ಲಿನ ಕೈಗಾರಿಕಾ ಸಚಿವರಾದ ಪಿ. ರಾಜೀವ್ ಅವರು ಬೆಂಗಳೂರಿನಲ್ಲಿ ನೀರಿಲ್ಲವೆಂದು ತಮ್ಮ ರಾಜ್ಯಕ್ಕೆ ಬರುವಂತೆ ಇಲ್ಲಿನ ಐ.ಟಿ.ಕಂಪನಿಗಳಿಗೆ ಆಹ್ವಾನಿಸಿರುವುದನ್ನು ಮಾಧ್ಯಮಗಳಲ್ಲಿ ಗಮನಿಸಿದ್ದೇನೆ.

ಇದು ಒಕ್ಕೂಟ ವ್ಯವಸ್ಥೆಯ ತತ್ತ್ವಕ್ಕೆ ವಿರುದ್ಧವಾದುದು. ಅವರ ಈ ನಡವಳಿಕೆ ಆರೋಗ್ಯಕರವಲ್ಲ, ಖಂಡನೀಯ ಎಂದು ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.

ಒಕ್ಕೂಟ ವ್ಯವಸ್ಥೆಯಲ್ಲಿ ಪರಸ್ಪರ ಕೊಡು-ಕೊಳ್ಳುವಿಕೆ ಇರಬೇಕೇ ವಿನಾ ಪರಿಸ್ಥಿತಿಯ ದುರ್ಲಾಭ ಪಡೆಯಲು ನೋಡಬಾರದು. ಇದರಿಂದ ಯಾರಿಗೂ ಒಳಿತಾಗುವುದಿಲ್ಲ.ಈ ಪ್ರಾಥಮಿಕ ಸತ್ಯವನ್ನು ಕೇರಳದ ಸಚಿವರು ಅರ್ಥ ಮಾಡಿಕೊಳ್ಳಬೇಕು.

ನಮ್ಮಲ್ಲಿ ಕೇರಳ ಮೂಲದ ಲಕ್ಷಾಂತರ ಯುವಕ- ಯುವತಿಯರು ನೆಮ್ಮದಿಯಿಂದ ಕೆಲಸ ಮಾಡುತ್ತಿದ್ದಾರೆ ಎನ್ನುವುದನ್ನು ಅವರು ಮರೆಯಬಾರದು. ಕೇರಳ ಒಂದು ರಾಜ್ಯವಾಗಿ ಎಷ್ಟು ಬೇಕಾದರೂ ಬಂಡವಾಳ ಆಕರ್ಷಿಸಲಿ. ಆ ಸ್ವಾತಂತ್ರ್ಯ ಅವರಿಗಿದೆ. ಅದು ಬಿಟ್ಟು ಕ್ಷುಲ್ಲಕ ರಾಜಕಾರಣ ಸರಿಯಲ್ಲ ಎಂದು ಕಿಡಿಕಾರಿದ್ದಾರೆ.

Latest Indian news

Popular Stories