ಬೆಂಗಳೂರು , ಡಿಸೆಂಬರ್ 01: ಬೆಂಗಳೂರು ನಗರದಲ್ಲಿ ವಾಯುಮಾಲಿನ್ಯ ನಿಯಂತ್ರಣಕ್ಕೆ ತರುವ ನಿಟ್ಟಿನಲ್ಲಿ ಕ್ಯಾಬ್ ಅಗ್ರಿಗೇಟರ್ ಉಬರ್ ನಗರದಲ್ಲಿ ಎಲೆಕ್ಟ್ರಿಕ್ ವಾಹನ ಸೇವೆ ಉಬರ್ ಗ್ರೀನ್‌ಅನ್ನು ಪ್ರಾರಂಭಿಸಿದೆ.
ನವೆಂಬರ್ 30ರಂದು ಅರಮನೆ ಮೈದಾನದಲ್ಲಿ ಬೆಂಗಳೂರು ಟೆಕ್ ಸಮ್ಮಿಟ್ 2023ರಲ್ಲಿ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಉಬರ್ ಗ್ರೀನ್‌ಗೆ ಚಾಲನೆ ನೀಡಿದರು.ಉಬರ್ ಗ್ರೀನ್‌ಗೆ ಚಾಲನೆ ನೀಡಿದ ಬಳಿಕ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ ” ಬೆಂಗಳೂರಿನಲ್ಲಿ ಗಾಳಿಯ ಗುಣಮಟ್ಟವನ್ನು ಸುಧಾರಿಸುವುದು ನಮ್ಮ ಸಾಮೂಹಿಕ ಜವಾಬ್ದಾರಿಯಾಗಿದೆ.ಇಂದಿನಿಂದಲೇ ಮಧ್ಯ ಬೆಂಗಳೂರು ಸೇರಿದಂತೆ ನಗರದ ಹಲವು ಭಾಗಗಳಲ್ಲಿ ಊಬರ್ ಗ್ರೀನ್ ಈಗ ಲಭ್ಯವಿದ್ದು, ಶೀಘ್ರದಲ್ಲೇ ಇದನ್ನು ನಗರದ ಹೆಚ್ಚಿನ ಭಾಗಗಳಿಗೆ ವಿಸ್ತರಿಸಲಾಗುವುದು. ಮುಂದಿನ ದಿನಗಳಲ್ಲಿ ಹೆಚ್ಚಿನ ಜನರು ಊಬರ್ ಗ್ರೀನ್ ವಾಹನದಲ್ಲಿ ಪ್ರಯಾಣ ಮಾಡಲಿದ್ದಾರೆ. ಈ ಸೇವೆಯು ಪ್ರಯಾಣಿಕರಿಗೆ ಹೆಚ್ಚು ಅನುಕೂಲವಾಗಲಿದೆ ಎಂದು ಊಬರ್ ಕಂಪನಿ ತಿಳಿಸಿದೆ.