ಬೆಂಗಳೂರು(ಮೇ 11): ಬೆಂಗಳೂರಿನಲ್ಲಿ ಮಳೆಯಿಂದ ಪ್ರವಾಹ ಉಂಟಾಗುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರದ (ಕೆಎಸ್‌ಎನ್‌ಡಿಎಂಸಿ) ವತಿಯಿಂದ ರಾಜಕಾಲುವೆಗಳಿಗೆ ಬರೋಬ್ಬರಿ 124 ಸೆನ್ಸಾರ್‌ಗಳನ್ನು ಅಳವಡಿಕೆ ಮಾಡಲಾಗಿದೆ.
ಬೆಂಗಳೂರಿನಲ್ಲಿ ಕಳೆದ ಎರಡು ವರ್ಷಗಳ ಹಿಂದೆ ದೊಡ್ಡ ಮಟ್ಟದ ಪ್ರವಾಹವೇ ಸೃಷ್ಟಿಯಾಗಿತ್ತು. ಇದರಿಂದ ಐಟಿ ಸಿಟಿ ಎಂದು ಖ್ಯಾತಿಯಾಗಿದ್ದ ಬೆಂಗಳೂರಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಅಪಖ್ಯಾತಿ ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ ಈ ವರ್ಷ ಬೆಂಗಳೂರಿನಲ್ಲಿ ಮಳೆಯಿಂದ ಪ್ರವಾಹ ಪರಿಸ್ಥಿತಿ ಉಂಟಾಗುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರದ (ಕೆಎಸ್‌ಎನ್‌ಡಿಎಂಸಿ) ವತಿಯಿಂದ ರಾಜಕಾಲುವೆಗಳಿಗೆ ಬರೀಬ್ಬರಿ 124 ಸೆನ್ಸಾರ್‌ಗಳನ್ನು ಅಳವಡಿಕೆ ಮಾಡಲಾಗಿದೆ. ಈ ಮೂಲಕ ಮಳೆ ಬರುವ ವೇಳೆ ರಾಜಕಾಲುವೆಗಳು ಉಕ್ಕಿ ಹರಿಯುವ ಮುನ್ನವೇ ನೀರು ಹರಿಯುವ ಮಟ್ಟವನ್ನು ಅರಿತು ಸುತ್ತಲಿನ ಜನರನ್ನು ಸ್ಥಳಾಂತರ ಮಾಡುವುದು ಹಾಗೂ ಪ್ರವಾಹ ತಡೆಗಟ್ಟುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವುದಕ್ಕೆ ನೆರವಾಗಲಿದೆ.