ಕರ್ನಾಟಕದ ರೈತರನ್ನು ಬಂಧಿಸಿರುವ ಮಧ್ಯಪ್ರದೇಶ ಸರ್ಕಾರದ ಕ್ರಮ ಅತ್ಯಂತ ಖಂಡನೀಯ :ಸಿಎಂ ಸಿದ್ದರಾಮಯ್ಯ ವಾಗ್ಧಾಳಿ

ಬೆಂಗಳೂರು: ಕರ್ನಾಟಕದ ರೈತರನ್ನು ಬಂಧಿಸಿರುವ ಮಧ್ಯಪ್ರದೇಶ ಸರ್ಕಾರದ ಕ್ರಮ ಅತ್ಯಂತ ಖಂಡನೀಯ ಎಂದು ಸಿಎಂ ಸಿದ್ದರಾಮಯ್ಯ ವಾಗ್ಧಾಳಿ ನಡೆಸಿದರು.

ದೆಹಲಿಯಲ್ಲಿ ನಾಳೆ ನಡೆಯಲಿರುವ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಹೋಗುತ್ತಿದ್ದ ಹುಬ್ಬಳ್ಳಿಯ ರೈತರನ್ನು ಭೋಪಾಲ್ ನಲ್ಲಿ ಬಂಧಿಸಿರುವ ಮಧ್ಯಪ್ರದೇಶ ಸರ್ಕಾರದ ಕ್ರಮ ಅತ್ಯಂತ ಖಂಡನೀಯ.ಬಂಧಿಸಲಾದ ರಾಜ್ಯದ ನಮ್ಮ ಎಲ್ಲ ರೈತರನ್ನು ತಕ್ಷಣ ಬಿಡುಗಡೆಗೊಳಿಸಿ ನಾಳೆ ದೆಹಲಿಯ ಜಂತರ್ ಮಂತರ್ ನಲ್ಲಿ ನಡೆಯಲಿರುವ ಪ್ರತಿಭಟನೆಯಲ್ಲಿ ಭಾಗವಹಿಸಿಕೊಳ್ಳಲು ಕಳಿಸಿಕೊಡಬೇಕು ಎಂದು ಮಧ್ಯಪ್ರದೇಶ ಸರ್ಕಾರವನ್ನು ಒತ್ತಾಯಿಸುತ್ತಿದ್ದೇನೆ.

ಬಂಧಿಸಿರುವುದು ಮಧ್ಯಪ್ರದೇಶದ ಸರ್ಕಾರವಾದರೂ ಈ ದುಷ್ಕೃತ್ಯದ ಹಿಂದಿನ ಕ್ರಿಮಿನಲ್ ಮೆದುಳು ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರ ಎನ್ನುವುದು ಸ್ಪಷ್ಟವಾಗಲಿದೆ ಎಂದರು.

ನರೇಂದ್ರ ಮೋದಿ ಅವರ ಸರ್ಕಾರದ ಈಗಿನ ಕ್ರಮಗಳನ್ನು ನೋಡಿದರೆ ರೈತರನ್ನು ಬೆದರಿಸಿ ತಲೆ ಎತ್ತದಂತೆ ಮಾಡುವುದೇ ಮುಖ್ಯ ಉದ್ದೇಶವಿದ್ದಂತೆ ಕಾಣುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ಧಾಳಿ ನಡೆಸಿದರು.

Latest Indian news

Popular Stories