ಬೆಂಗಳೂರು: ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ಪ್ರಕರಣದಲ್ಲಿ ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ಗೆ ಶ್ರೀರಂಗಪಟ್ಟಣದ 3ನೇ ಅಪರ ಜಿಲ್ಲಾ ಮತ್ತ ಸತ್ರ ನ್ಯಾಯಾಲಯ ಜಾಮೀನು ನೀಡಿದೆ.
ಸ್ಥಳೀಯ ಇಬ್ಬರು ಶ್ಯೂರಿಟಿ ಸೇರಿ 2 ಲಕ್ಷ ರೂ ಮೌಲ್ಯದ ಬಾಂಡ್ ನೀಡುವಂತೆ ಹೇಳಿ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.ಈ ಹಿಂದೆ ಡಿ 24 ರಂದು ಪ್ರಭಾಕರ್ ಭಟ್ ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದರು.
ಮುಸ್ಲಿಂ ಮಹಿಳೆಯರಿಗೆ ದಿನಕ್ಕೊಬ್ಬ ಗಂಡಂದಿರು. ಅವರಿಗೆ ಪರ್ಮನೆಂಟ್ ಗಂಡ ಇರಲಿಲ್ಲ. ಅವರಿಗೆ ಪರ್ಮನೆಂಟ್ ಗಂಡನನ್ನು ಕೊಟ್ಟಿದ್ದೇ ಮೋದಿ ಸರ್ಕಾರ’ ಎಂದು ಪ್ರಭಾಕರ್ ಭಟ್ ಹೇಳಿದ್ದರು.ಇದರಿಂದ ಕೆರಳಿದ ಸಾಮಾಜಿಕ ಕಾರ್ಯಕರ್ತೆ ನಜ್ಮಾ ನಝೀರ್ ಚಿಕ್ಕನೇರಳೆ ಪ್ರಭಾಕರ್ ಭಟ್ ವಿರುದ್ಧ ದೂರು ನೀಡಿದ್ದರು. ದೂರಿನ ಮೇರೆಗೆ ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ ಭಾಕರ್ ಭಟ್ ವಿರುದ್ಧ IPC ಸೆಕ್ಷನ್ 354, 294, 509, 506, 153A, 295 295A, 298ರ ಅಡಿ ಎಫ್ಐಆರ್ ದಾಖಲಾಗಿತ್ತು