ಚಿತ್ರದುರ್ಗ (ಜ.19): ಅಜ್ಜಿಗೆ ಅನಾರೋಗ್ಯವೆಂದು ಚಿಕಿತ್ಸೆ ಕೊಡಿಸುವುದಕ್ಕೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆ ಫಲಿಸದೇ ಅಜ್ಜಿ ಸಾವನ್ನಪ್ಪಿದ್ದರು.ಇನ್ನು ಮೃತ ದೇಹವನ್ನು ಕಾರಿನಲ್ಲಿ ಬೆಂಗಳೂರಿನಿಂದ ಬಳ್ಳಾರಿಗೆ ಕೊಂಡೊಯ್ಯುವಾಗ ಚಿತ್ರದುರ್ಗದ ಬಳಿ ಕಾರಿನ ಟೈರ್ ಬ್ಲ್ಯಾಸ್ಟ್ ಆಗಿದ್ದು, ವೇಗದಲ್ಲಿದ್ದ ಕಾರು ಪಲ್ಟಿಯಾಗಿ ಅಜ್ಜಿಯ ಮೂವರು ಮೊಮ್ಮಕ್ಕಳು ಕೂಡ ಹೆದ್ದಾರಿಯಲ್ಲಿ ದಾರುಣವಾಗಿ ಸಾವನ್ನಪ್ಪಿದ್ದಾರೆ.
ಅಜ್ಜಿಯ ಶವ ಕೊಂಡೊಯ್ಯುವಾಗ ಟೈಯರ್ ಬ್ಲಾಸ್ಟ್ ಕಾರು ಪಲ್ಟಿ, 3 ಮಂದಿ ಸ್ಥಳದಲ್ಲೇ ದುರ್ಮರಣಕ್ಕೀಡಾಗದ ಘಟನೆ ಚಿತ್ರದುರ್ಗದ ಮೊಳಕಾಲ್ಮೂರು ತಾಲ್ಲೂಕಿನ ರಾಂಪುರ ಬಳಿ ನಡೆದಿದೆ. ರಾಂಪುರ ಬಳಿಯ ಗ್ರ್ಯಾಂಡ್ ಪೋರ್ಡ್ ಹೋಟೆಲ್ ಬಳಿ ಮಧ್ಯಾಹ್ನದ ವೇಳೆ ಘಟನೆ ನಡೆದಿದೆ.
ಇನ್ನು ಈ ಘಟನೆಯಲ್ಲಿ ಮೂವರು ಸಾವನ್ನಪ್ಪಿದರೆ, ಉಳಿದ 3 ಮಂದಿಯ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಸ್ಥಳೀಯ ರಾಂಪುರ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ರಾಂಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನೆ ನಡೆದಿದ್ದು, ಸ್ಥಳಕ್ಕೆ ಪಿಎಸ್‌ಐ ಪರಶುರಾಮ್ ಲಮಾಣಿ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಇನ್ನು ಮೃತ ದೇಹಗಳನ್ನು ಕೂಡ ಆಸ್ಪತ್ರೆಗೆ ರವಾನಿಸಲಾಗಿದೆ. ಕಾರಿನ ಟೈರ್ ಬ್ಲಾಸ್ಟ್ ಆಗಿದ್ದೇ ಕಾರು ಅಪಘಾತಕ್ಕೆ ಕಾರಣವೆಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.
ಮೃತರೆಲ್ಲರೂ ಸಿರುಗುಪ್ಪ ಮೂಲದವರಾಗಿದ್ದಾರೆ. ಸುರೇಶ್ (40) , ಮಲ್ಲಿ (25), ಭೂಮಿಕ (9) ಮೃತ ದುರ್ದೈವಿಗಳು. ಇನ್ನು ನಾಗಮ್ಮ (31), ತಾಯಮ್ಮ (56), ಧನರಾಜ್ (39) ಹಾಗೂ ಚಾಲಕ ಶಿವು (26) ಗಂಭೀರ ಗಾಯಾಳುಗಳು ಎಂದು ಗುರುತಿಸಲಾಗಿದೆ.