ಬೆಂಗಳೂರು :ಕೃಷಿ ಹೊಂಡದಲ್ಲಿ ಮುಳುಗಿ ಒಂದೇ ಕುಟುಂಬದ ಮೂವರು ದುರ್ಮರಣ

ಬೆಂಗಳೂರು: ಕೃಷಿ ಹೊಂಡದಲ್ಲಿ ಮುಳುಗಿ ಒಂದೇ ಕುಟುಂಬದ ಮೂವರು ದುರ್ಮರಣಕ್ಕೀಡಾದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಕರಿಬೀರನಹೊಸಹಳ್ಳಿಗ್ರಾಮದಲ್ಲಿ ನಡೆದಿದೆ.

ಮೃತರನ್ನು ಮರಿಯಪ್ಪ, (70) ಮುನಿಯಮ್ಮ,(60) ಭಾರತಿ (40) ಎಂದು ಗುರುತಿಸಲಾಗಿದೆ.

ಘಟನೆ ನಡೆದ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಧಾವಿಸಿ ಮೂವರ ಮೃತದೇಹಗಳನ್ನು ಹೊರಕ್ಕೆ ತೆಗೆದಿದ್ದಾರೆ.ಜಮೀನಲ್ಲಿದ್ದ ಕೃಷಿ ಹೊಂಡದಲ್ಲಿ ಮುಳುಗಿ ಮೃತಪಟ್ಟಿದ್ದು, ಒಬ್ಬರನ್ನು ಒಬ್ಬರು ಕಾಪಾಡಲು ಹೋಗಿ ಈ ದುರ್ಘಟನೆ ಸಂಭವಿಸಿರಬಹುದೆಂದು ಹೇಳಲಾಗಿದೆ. ಹೊಸಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ

Latest Indian news

Popular Stories