Bengaluru Urban

ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿಗೆ ಬಿಗ್ ರಿಲೀಫ್ : 3 ವರ್ಷ ಜೈಲು ಶಿಕ್ಷೆ ಅಮಾನತ್ತಿನಲ್ಲಿರಿಸಿದ ಹೈಕೋರ್ಟ್!

ಬೆಂಗಳೂರು: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಿಂದ ಗೃಹ ಸಾಲ ಕೊಡಿಸಿ ವಂಚಿಸಿದ ಆರೋಪದಡಿ ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿಗೆ ಬಿಗ್ ರಿಲೀಫ್ ಸಿಕ್ಕಿದೆ. ಪ್ರಕರಣದಲ್ಲಿ ಮಾಜಿ ಸಚಿವ ಎಸ್‌.ಎನ್‌.ಕೃಷ್ಣಯ್ಯ ಶೆಟ್ಟಿ ಅವರಿಗೆ ಮೂರು ವರ್ಷ ಜೈಲು ಶಿಕ್ಷೆ ವಿಧಿಸಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೊರಡಿಅಮಾನತ್ತಿನಲ್ಲಿರಿಸಿ ಹೈಕೋರ್ಟ್‌ ಅಮಾನತ್ತಿನಲ್ಲಿರಿಸಿದೆ.

ಪ್ರಕರಣದಲ್ಲಿ ತಮ್ಮನ್ನು ದೋಷಿಯಾಗಿ ಪರಿಗಣಿಸಿ ಮೂರು ವರ್ಷ ಜೈಲು ಶಿಕ್ಷೆ ವಿಧಿಸಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು 2025ರ ಫೆ.6ರಂದು ಹೊರಡಿಸಿದ್ದ ಆದೇಶ ರದ್ದು ಕೋರಿ ಮಾಜಿ ಸಚಿವ ಎಸ್‌.ಎನ್‌.ಕೃಷ್ಣಯ್ಯ ಶೆಟ್ಟಿ ಕ್ರಿಮಿನಲ್‌ ಮೇಲ್ಮನವಿ ಸಲ್ಲಿಸಿದ್ದರು.

ಪ್ರಕರಣ ಹಿನ್ನೆಲೆ?

ಕೃಷ್ಣಯ್ಯ ಶೆಟ್ಟಿ 1993ರಲ್ಲಿ ಬಾಲಾಜಿ ಕೃಪಾ ಎಂಟರ್ಪ್ರೈಸಸ್ ಮಾಲೀಕರಾಗಿದ್ದ ವೇಳೆ ಬಿಟಿಎಸ್, ಕೆಎಸ್‌ಆರ್ಟಿಸಿ, ಬಿಎಸ್‌ಎನ್‌ಎಲ್ ಇತರೆ ಸಾರ್ವಜನಿಕ ಉದ್ದಿಮೆಗಳ 181 ನೌಕರರಿಗೆ ಗೃಹ ನಿರ್ಮಾಣಕ್ಕೆ ಸಾಲ ಕೊಡಿಸುವುದಾಗಿ ಹೇಳಿ ವಂಚಿಸಿದ್ದ ಆರೋಪವಿದೆ. ಬ್ಯಾಂಕಿನಿಂದ ಪಡೆದ ಮೊತ್ತದಲ್ಲಿ 3.53 ಕೋಟಿ ಸಾಲ ತೀರಿಸಿಲ್ಲ. 7.15 ಕೋಟಿ ಸಾಲಕ್ಕೆ ನಕಲಿ ದಾಖಲೆ ಸೃಷ್ಟಿಸಲಾಗಿದೆ ಎಂದು ಆರೋಪಿಸಲಾಗಿತ್ತು. ಮುಖ್ಯ ವಿಚಕ್ಷಣದಳದ ಅಂದಿನ ಮುಖ್ಯಸ್ಥರು ನೀಡಿದ ದೂರು ಆಧರಿಸಿ ಸಿಬಿಐ ತನಿಖೆ ನಡೆಸಿ ದೋಷಾರೋಪ ಪಟ್ಟಿ ಸಲ್ಲಿಸಿತ್ತು.

Related Articles

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button