Bengaluru Urban

ನಟ ದರ್ಶನ್ ಗೆ ಬಿಗ್ ಶಾಕ್ : ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲು ಪೊಲೀಸರ ಸಿದ್ಧತೆ!

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಇತ್ತೀಚಿಗೆ ನಟ ದರ್ಶನ್ ಅವರು ಬೆನ್ನು ನೋವಿನ ಕಾರಣ ನೀಡಿ ಹೈಕೋರ್ಟ್ ನಿಂದ ಮಧ್ಯಂತರ ಜಾಮೀನು ಪಡೆದುಕೊಂಡು ಬಳ್ಳಾರಿ ಜೈಲಿನಿಂದ ಬಿಡುಗಡೆಯಾಗಿದ್ದರು. ಬಳಿಕ ಬೆಂಗಳೂರಿನ ಕೆಂಗೇರಿ ಬಳಿ ಇರುವ ಬಿಡಿಎಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಆದರೆ ಬಳ್ಳಾರಿ ಜೈಲಿನಿಂದ ಬಿಡುಗಡೆಯಾದರೂ ಕೂಡ ನಟ ದರ್ಶನ್ ಗೆ ರಿಲೀಫ್ ಇಲ್ಲದಂತಾಗಿದೆ. ಇದಕ್ಕೆ ಕಾರಣ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಇದೀಗ ಪೊಲೀಸರು ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ. ಹೌದು ನಟ ದರ್ಶನ್ ಅವರು ಬೆನ್ನು ನೋವಿನ ಸಮಸ್ಯೆ ತಿಳಿಸಿ ಹೈಕೋರ್ಟ್ ನಿಂದ ಜಾಮೀನು ಪಡೆದುಕೊಂಡಿದ್ದರು. ಈ ಒಂದು ಆದೇಶವನ್ನು ಪ್ರಶ್ನಿಸಿ ಇದೀಗ ಬೆಂಗಳೂರಿನ ಪೊಲೀಸರು ಸುಪ್ರೀಂಕೋರ್ಟಿಗೆ ಮೇಲ್ಮನವಿ ಸಲ್ಲಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ.

ಆರೋಪಿ ದರ್ಶನಿಗೆ ಮಧ್ಯಂತರ ಜಾಮೀನು ಮಂಜೂರು ಆದ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟಿಗೆ ಮೇಲ್ಮನವಿ ಸಲ್ಲಿಸಲು ಸರ್ಕಾರ ಕೂಡ ಅನುಮತಿ ನೀಡಿದ್ದು, ಹಾಗಾಗಿ ಇದೀಗ ಪೊಲೀಸರು ಸುಪ್ರೀಂ ಕೋರ್ಟ್ ಮೊರೆ ಹೋಗಲಿದ್ದಾರೆ ಸದ್ಯದಲ್ಲೇ ಪೊಲೀಸರು ಸುಪ್ರೀಂಕೋರ್ಟಿಗೆ ಮೇಲ್ಮನವಿ ಅರ್ಜಿ ಸಲ್ಲಿಸಲಿದ್ದಾರೆ ಎಂದು ತಿಳಿಬಂದಿದೆ.

Related Articles

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button