ರಾಜ್ಯದ ರೈತರಿಗೆ ಬಿಗ್‌ ಶಾಕ್‌ : ಬಿತ್ತನೆ ಬೀಜದ ದರದಲ್ಲಿ ಭಾರೀ ಏರಿಕೆ!

ಬೆಂಗಳೂರು: ಬರದಿಂದ ಮೊದಲೇ ಸಂಕಷ್ಟದಲ್ಲಿರುವ ರೈತರಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಬಿತ್ತನೆ ಬೀಜದ ದರದಲ್ಲಿ ಭಾರೀ ಏರಿಕೆಯಾಗಿದೆ.

ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಉತ್ತಮವಾಗಿರುವುದರಿಂದ ಈ ಬಾರಿಯ ಮುಂಗಾರು ಹಂಗಾಮಿನ ಬಿತ್ತನೆಗೆ ರಾಜ್ಯಾದ್ಯಂತ ರೈತರು ಸಜ್ಜಾಗಿದ್ದಾರೆ.ಬಿತ್ತನೆ ಬೀಜದ ಬೆಲೆಯಲ್ಲಿ ಭಾರೀ ಏರಿಕೆಯಾಗಿದ್ದು, ರೈತರಿಗೆ ಮೊತ್ತೊಂದು ಶಾಕ್‌ ಎದುರಾಗಿದೆ.

ರಾಜ್ಯದಲ್ಲಿ ವಿವಿಧ ಭತ್ತದ ತಿಳಗಳ ಬಿತ್ತನೆ ಬೀದರ ದರ ಕ್ವಿಂಟಾಲ್‌ಗೆ 675 ರೂ.ನಿಂದ 1,875 ರು. ವರೆಗೂ ಏರಿಕೆಯಾಗಿದೆ. ಹೆಸರು (5 ಕೆಜಿ) 501 ರಿಂದ 785ರವರೆಗೆ, ತೊಗರಿ (5 ಕೆಜಿ) 525 ರಿಂದ 770 ರವರೆಗೆ ಏರಿಕೆಯಾಗಿದ್ರೆ, ಜೋಳ (3 ಕೆಜಿ) 202 ರಿಂದ 285ರ ವರೆಗೂ ಏರಿಕೆಯಾಗಿದೆ.

ಇನ್ನು ಬಿತ್ತನೆ ಬೀಜದ ದರ ಏರಿಕೆ ಕುರಿತು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, 2023-24ನೇ ಸಾಲಿನ ಭೀಕರ ಬರಗಾಲದಿಂದಾಗಿ ರಾಜ್ಯದಲ್ಲಿ ಬೀಜೋತ್ಪಾದನೆ ಗಣನೀಯವಾಗಿ ಕುಂಠಿತವಾಗಿದ್ದು, ಬೀಜೋತ್ಪಾದಕರಿಂದ ಖರೀದಿಸುವ ಬಿತ್ತನೆ ಬೀಜದ ದರಗಳು ಸಹ ಗಣನೀಯವಾಗಿ ಏರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಬಿತ್ತನೆ ಬೀಜದ ಮಾರಾಟದ ದರ ಏರಿಕೆಯಾಗಿದೆ. ಈ ದರ ಏರಿಕೆ ಮುಂಗಾರು ಬೆಳೆ ಬೆಳೆಯುವ ಎಲ್ಲ ರಾಜ್ಯಗಳಲ್ಲಿಯೂ ಆಗಿದ್ದು ಉಳಿದ ರಾಜ್ಯಗಳಿಗೆ ಹೋಲಿಸಿದರೆ ನಮ್ಮಲ್ಲಿ ಬೀಜಗಳ ದರ ಕಡಿಮೆ ಇದೆ ಎಂದಿದ್ದಾರೆ.

ಬಿತ್ತನೆ ಬೀಜಗಳ ಮಾರಾಟ ದರಗಳನ್ನು ನಿಗದಿಪಡಿಸುವ ಸಂದರ್ಭಗಳಲ್ಲಿ ಬಿತ್ತನೆ ಬೀಜ ಖರೀದಿ ದರಗಳು ಹಾಗೂ ಗರಿಷ್ಠ APMC ಮಾರಾಟ ದರಗಳನ್ನು ಆಧಾರವಾಗಿ ಪರಿಗಣಿಸಲಾಗುತ್ತದೆ. 2022-23ನೇ ಸಾಲಿಗೆ ಹೋಲಿಸಿದಾಗ 2023-24ನೇ ಸಾಲಿನಲ್ಲಿ ವಿವಿಧ ಬೆಳೆಗಳ ಖರೀದಿ ದರಗಳಲ್ಲಿ (Procurement Rates) ಗರಿಷ್ಠ ಶೇ.59.58ರಷ್ಟು ವ್ಯತ್ಯಾಸವಾಗಿರುತ್ತದೆ. ರೈತರು ತಮ್ಮ ಜಮೀನಿನಲ್ಲಿಯೇ ಬೀಜಗಳನ್ನು ಉತ್ಪಾದನೆ ಮಾಡುತ್ತಾರೆ. ಇದನ್ನು ಕರ್ನಾಟಕ ರಾಜ್ಯ ಬೀಜ ನಿಗಮ ನಿ., ರಾಷ್ಟ್ರೀಯ ರಾಜ್ಯ ಬೀಜ ನಿ., ಕರ್ನಾಟಕ ಎಣ್ಣೆಬೀಜ ಬೆಳೆಗಾರರ ಮಹಾ ಮಂಡಳಿ ಹಾಗೂ ಖಾಸಗಿ ಸಂಸ್ಥೆಗಳು ಕೈಗೊಂಡು ಸರಬರಾಜು ಮಾಡುತ್ತವೆ ಎಂದು ಹೇಳಿದ್ದಾರೆ.

Latest Indian news

Popular Stories