ಬಿಟ್ ಕಾಯಿನ್’ ಪ್ರಕರಣ : ಆರೋಪಿಯನ್ನ 7 ದಿನಗಳ ಕಾಲ ‘SIT’ ಕಸ್ಟಡಿಗೆ ಒಪ್ಪಿಸಿ ಕೋರ್ಟ್ ಆದೇಶ

ಬೆಂಗಳೂರು: ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಇನ್ಸ್ಪೆಕ್ಟರ್ ಲಕ್ಷ್ಮಿಕಾಂತಯ್ಯನನ್ನು ಸಿಐಡಿ ಹಾಗೂ ಎಸ್‌ಐಟಿ ಬಂಧಿಸಿ ಬೆಂಗಳೂರಿನ 1ನೇ ACMM ಕೋರ್ಟಿಗೆ ಹಾಜರುಪಡಿಸಿತು. ವಿಚಾರಣೆ ನಡೆಸಿದ ಕೋರ್ಟ್ ಆರೋಪಿಯನ್ನು 7 ದಿನಗಳ ಕಾಲ ಎಸ್‌ಐಟಿ ಕಸ್ಟಡಿಗೆ ಒಪ್ಪಿಸಿ ಎಂದು ಆದೇಶ ಹೊರಡಿಸಿ ವಿಚಾರಣೆಯನ್ನು ಮುಂದೂಡಿದೆ.

ಬಿಟ್ ಕಾಯಿನ್ ಪ್ರಕರಣದಲ್ಲಿ ಈ ಹಿಂದೆ ಲಕ್ಷ್ಮಿಕಾಂತಯ್ಯ ಬಿಟ್ ಕಾಯಿನ್ ಪ್ರಕರಣದ ತನಿಖಾಧಿಕಾರಿ ಆಗಿದ್ದರು. ಈ ಹಿನ್ನೆಲೆಯಲ್ಲಿ ಇನ್ಸ್ಪೆಕ್ಟರ್ ಲಕ್ಷ್ಮಿಕಾಂತಯ್ಯನನ್ನು ಎಸ್‌ಐಟಿ ಅಧಿಕಾರಿಗಳು ಇಂದು ಬಂಧಿಸಿ ಬೆಂಗಳೂರಿನ ಒಂದನೇ ಎಸಿ ಎಂ ಎಂ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಇದೀಗ ವಿಚಾರಣೆ ನಡೆಸಿದ ನ್ಯಾಯಾಲಯವು 7 ದಿನಗಳ ಕಾಲ ವರೆಗೆ ಎಸ್‌ಐಟಿ ಕಸ್ಟಡಿಗೆ ಒಪ್ಪಿಸಿ ಎಂದು ಆದೇಶ ಹೊರಡಿಸಿದೆ.

ಇನ್ನೂ ಇದೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಪ್ರಮುಖ ಆರೋಪಿಯನ್ನು ಬಂಧಿಸುವುದಕ್ಕೆ ತೆರಳಿದಾಗ ಆರೋಪಿ ಡಿವೈಎಸ್ಪಿ ಶ್ರೀಧರ್ ಪೂಜಾರ್, ಪೊಲೀಸರ ಕಾರಿಗೆ ಗುದ್ದಿ ಎಸ್ಕೇಪ್ ಆದ ಘಟನೆ ನಿನ್ನೆ ಕಾಫಿ ಬೋರ್ಡ್ ಸಿಗ್ನಲ್ ಬಳಿ ನಡೆದಿದೆ.

Latest Indian news

Popular Stories