2027ರ ಡಿಸೆಂಬರ್ ಹೊತ್ತಿಗೆ ‘ಬೆಂಗಳೂರು ಉಪನಗರ ರೈಲು ಯೋಜನೆ’ ಪೂರ್ಣ- ಸಚಿವ ಎಂ.ಬಿ ಪಾಟೀಲ

ಬೆಂಗಳೂರು: ಮಹತ್ವಾಕಾಂಕ್ಷಿ ಬೆಂಗಳೂರು ಉಪನಗರ ರೈಲು ಯೋಜನೆಗೆ ಜಮರ್ನಿಯ ಲಕ್ಸಂಬರ್ಗ್ ನಗರದ ಕೆಎಫ್ ಡಬ್ಲ್ಯು ಡೆವಲಪ್ಮೆಂಟ್ ಬ್ಯಾಂಕ್ ರಾಜ್ಯ ಸರಕಾರದ ಕೆ-ರೈಡ್ ಸಂಸ್ಥೆಗೆ ₹4,561 ಕೋಟಿ (500 ಮಿಲಿಯನ್ ಯೂರೋ) ಸಾಲ ನೀಡುತ್ತಿದ್ದು, ಈ ಸಂಬಂಧ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ಅವರ ಸಮ್ಮುಖದಲ್ಲಿ ಶುಕ್ರವಾರ ಅಧಿಕೃತವಾಗಿ ಇಲ್ಲಿ ಒಡಂಬಡಿಕೆಗೆ ಸಹಿ ಅಂಕಿತ ಹಾಕಲಾಯಿತು.

ಕೆ-ರೈಡ್ ಪರವಾಗಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿಯೂ ಆದ ಮೂಲಸೌಕರ್ಯ ಅಭಿವೃದ್ಧಿ ಇಲಾಖೆ ಕಾರ್ಯದರ್ಶಿ ಎನ್. ಮಂಜುಳಾ ಮತ್ತು ಕೆಎಫ್ ಡಬ್ಲ್ಯೂ ಪರವಾಗಿ ಅದರ ಭಾರತದ ನಿರ್ದೇಶಕ ವೂಲ್ಫ್ ಮೌತ್ ಅಂಕಿತ ಹಾಕಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, `ಕೇಂದ್ರ ಸರಕಾರದ ಆರ್ಥಿಕ ಇಲಾಖೆ ಮತ್ತು ಕೆಎಫ್ ಡಬ್ಲ್ಯು ನಡುವೆ ಈ ಸಂಬಂಧ 2023ರ ಡಿ.15ರಂದು ಪ್ರಾಥಮಿಕ ಒಪ್ಪಂದವಾಗಿತ್ತು. ಈಗ ಕೆಎಫ್ ಡಬ್ಲ್ಯು ಮತ್ತು ಯೋಜನೆಯ ಅನುಷ್ಠಾನದ ಹೊಣೆ ಹೊತ್ತಿರುವ ಕೆ-ರೈಡ್ ನಡುವೆ ಪೂರಕ ಒಪ್ಪಂದ ಮಾಡಿಕೊಳ್ಳಲಾಗಿದೆ. ಯೋಜನೆಯ ಎಲ್ಲಾ ನಾಲ್ಕೂ ಕಾರಿಡಾರ್ ಗಳ ಕಾಮಗಾರಿಗಳು 2027ರ ಡಿಸೆಂಬರ್ ವೇಳೆಗೆ ಪೂರ್ಣಗೊಳಿಸಲು ಇದು ಮಹತ್ವದ ಒಪ್ಪಂದ ಎಂದು ಹೇಳಿದರು.

ಶೇ.4ರ ಬಡ್ಡಿ ದರದಲ್ಲಿ 20 ವರ್ಷಗಳ ಅವಧಿಗೆ ಈ ಸಾಲವನ್ನು ಜರ್ಮನಿ ಬ್ಯಾಂಕ್ ನೀಡುತ್ತಿದೆ ಎಂದು ಅವರು ಮಾಹಿತಿ‌ ನೀಡಿದರು.

Latest Indian news

Popular Stories