ಬೆಂಗಳೂರು: ಫೆಬ್ರವರಿ 28 ರೊಳಗೆ ನಾಮಫಲಕಗಳಲ್ಲಿ ಶೇ.60 % ಕನ್ನಡ ಬಳಕೆ ಕಡ್ಡಾಯವಾಗಿದ್ದು, ಇಲ್ಲದಿದ್ರೆ ದಂಡ ಹಾಕಲಾಗುತ್ತದೆ ಎಂದು ರಾಜ್ಯ ಸರ್ಕಾರ ಎಚ್ಚರಿಕೆ ನೀಡಿದೆ.
ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಸರ್ಕಾರ ” ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಕಾಯ್ದೆ ಅನ್ವಯ ಬೆಂಗಳೂರಿನ ಎಲ್ಲಾ ಅಂಗಡಿ, ಮುಂಗಟ್ಟುಗಳು, ಕಂಪನಿಗಳು, ಸಂಸ್ಥೆಗಳು, ವಾಣಿಜ್ಯ ಮಳಿಗೆಗಳು, ಕಾರ್ಖಾನೆಗಳು, ಸಂಘ-ಸಂಸ್ಥೆ, ಶಿಕ್ಷಣ ಸಂಸ್ಥೆಗಳು ಸೇರಿದಂತೆ ಎಲ್ಲಾ ರೀತಿಯ ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಭಾಷೆ ಬಳಕೆ ಕಡ್ಡಾಯವಾಗಿದೆ. ಆದೇಶ ಪಾಲನೆಗೆ ಫೆಬ್ರವರಿ 28 ಕೊನೆಯ ದಿನವಾಗಿದೆ. ಪಾಲಿಸದಿದ್ದಲ್ಲಿ ಪರವಾನಗಿ ರದ್ದು ಮಾಡುವುದು ಅನಿವಾರ್ಯವಾಗಲಿದೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ನಾಮಫಲಕಗಳಲ್ಲಿ ಕನ್ನಡ ಬಳಕೆ ಕಡ್ಡಾಯ ಮಾಡುವ ವಿಚಾರಕ್ಕೆ ಕನ್ನಡಪರ ಸಂಘಟನೆಗಳು ಬೆಂಗಳೂರಿನಲ್ಲಿ ಭಾರಿ ಪ್ರತಿಭಟನೆ ನಡೆಸಿದ್ದವು. ನಂತರ ಸರ್ಕಾರ ನಾಮಫಲಕಗಳಲ್ಲಿ ಶೇ.60 % ಕನ್ನಡ ಬಳಕೆ ಕಡ್ಡಾಯಗೊಳಿಸಿದ್ದು, ಫೆ.28 ಡೆಡ್ ಲೈನ್ ನೀಡಿದೆ.