Bengaluru UrbanFeatured Story

ಮಾಜಿ ಸಿಎಂ ಬೊಮ್ಮಾಯಿ ಆರೋಗ್ಯ ವಿಚಾರಿಸಿದ ಪ್ರಧಾನಿ ನರೇಂದ್ರ ಮೋದಿ

ಬೆಂಗಳೂರು:ಮಾಜಿ ಶಾಸಕ ಸಿ.ಎಂ ಬೊಮ್ಮಾಯಿ ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಇಂದು ನರೇಂದ್ರ ಮೋದಿ ಅವರಿಗೆ ದೂರವಾಣಿ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು, ಶುಭ ಅಷ್ಟಮಿ ದಿನ, ನನಗೆ ಅಷ್ಟೈಶ್ವರ್ಯ ಒಲಿದ ಸಂಭ್ರಮ ಎಂದು ತಿಳಿಸಿದ್ದಾರೆ.ಶಸ್ತ್ರ ಚಿಕಿತ್ಸೆಗೆ ಒಳಗಾಗಿ ವಿಶ್ರಾಂತಿ ಪಡೆಯುತ್ತಿರುವ ಈ ಸಂದರ್ಭದಲ್ಲಿ ನನಗೆ ದೂರವಾಣಿ ಕರೆ ಮಾಡಿ ನನ್ನ ಆರೋಗ್ಯ ಕುಶಲೋಪರಿಯನ್ನು ವಿಚಾರಿಸಿದ ದೇಶದ ಹೆಮ್ಮೆಯ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರಿಗೆ ತುಂಬು ಹೃದಯದ ಧನ್ಯವಾದಗಳು ಅಂತ ತಿಳಿಸಿದ್ದಾರೆ.

ನಿಮ್ಮ ಕಾಳಜಿ ಮತ್ತು ಶುಭ ಹಾರೈಕೆ ನನ್ನ ಆತ್ಮಸ್ಥೈರ್ಯವನ್ನು ಹೆಚ್ಚಿಸಿದ್ದು, ಆದಷ್ಟು ಬೇಗ ಸಂಪೂರ್ಣ ಗುಣಮುಖನಾಗಿ ಜನಸೇವೆಗೆ ಮರಳುತ್ತೇನೆ ಎಂದು ತಿಳಿಸಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button