ಬೆಂಗಳೂರು: ಆದಾಯ ತೆರಿಗೆ ವಂಚನೆ ದೂರಿನ ಸಂಬಂಧ ಬೆಂಗಳೂರಿನ ಅನೇಕ ಕಡೆಗಳಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ದಾಳಿಯ ವೇಳೆಯಲ್ಲಿ ಬಿಬಿಎಂಪಿ ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಹಾಗೂ ಅವರ ಪತ್ನಿ ನಿವಾಸದಲ್ಲಿ 42 ಕೋಟಿ ರೂ ಕಂತೆ ಕಂತೆ ಹಣ ಪತ್ತೆಯಾಗಿತ್ತು.
ಬಿಬಿಎಂಪಿ ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಹಾಗೂ ಆತನ ಪತ್ನಿ ಕಾಂಗ್ರೆಸ್ಸಿನ ಮಾಜಿ ಕಾರ್ಪೊರೇಟರ್ ದಂಪತಿಯ ಮನೆಯಲ್ಲಿ ಐಟಿ ಅಧಿಕಾರಿಗಳು ವಶಪಡಿಸಿಕೊಂಡ 42 ಕೋಟಿ ರೂಪಾಯಿ ನಗದು ಯಾರಿಗೆ ಸೇರಿದ್ದು ಸನ್ಮಾನ್ಯ ಉಪಮುಖ್ಯಮಂತ್ರಿಗಳಾದ ಡಿ ಕೆ ಶಿವಕುಮಾರ್ ಅವರೆ? ಎಂದು ಪ್ರಶ್ನಿಸಿದ್ದಾರೆ.
ಮೊನ್ನೆಯ ಪಾಲಿಕೆಯಲ್ಲಿ ₹600 ಕೋಟಿ ಬಾಕಿ ಹಣ ಬಿಡುಗಡೆಯಾಗಿತ್ತು. ಇದು ಅದರ ಕಮಿಷನ್ ಹಣದ ಬಾಬ್ತು ಎಂದು ಅನೇಕ ಗುತ್ತಿಗೆದಾರರು ಹೇಳುತ್ತಿದ್ದಾರೆ ನಿಜವೇ ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ? ಎಂದು ಕೇಳಿದ್ದಾರೆ.