ಬೆಂಗಳೂರಲ್ಲಿ ತಡರಾತ್ರಿ ರೇವ್ ಪಾರ್ಟಿ ಮೇಲೆ ಸಿಸಿಬಿ ದಾಳಿ: 25 ಯುವತಿಯರು, ಡ್ರಗ್ಸ್ ಪತ್ತೆ

ಬೆಂಗಳೂರು: ಬೆಂಗಳೂರಿನಲ್ಲಿ ರೇವ್ ಪಾರ್ಟಿ ಮೇಲೆ ಸಿಸಿಬಿ ತಂಡ ದಾಳಿ ನಡೆಸಿದೆ. ಎಲೆಕ್ಟ್ರಾನಿಕ್ ಸಿಟಿ ಸಮೀಪದ ಜಿ.ಆರ್. ಫಾರ್ಮ್ ಹೌಸ್ ಮೇಲೆ ದಾಳಿ ಮಾಡಲಾಗಿದ್ದು, ಎಂಡಿಎಂಎ ಮಾತ್ರೆಗಳು ಮತ್ತು ಕೊಕೇನ್ ಪತ್ತೆಯಾಗಿದೆ.ಪಾರ್ಟಿಯಲ್ಲಿ 25ಕ್ಕೂ ಹೆಚ್ಚು ಯುವತಿಯರು ಇದ್ದರು.

ಆಂಧ್ರಪ್ರದೇಶ, ಬೆಂಗಳೂರು ಮೂಲದ 100ಕ್ಕೂ ಹೆಚ್ಚು ಜನರು ಭಾಗವಹಿಸಿದ್ದರು. ತಡರಾತ್ರಿ ಎರಡು ಗಂಟೆಯಾದರೂ ಪಾರ್ಟಿ ನಡೆಯುತ್ತಿತ್ತು. ಅವಧಿ ಮೀರಿ ಪಾರ್ಟಿ ನಡೆಸಿದ್ದು, ಡ್ರಗ್ಸ್ ಬಳಕೆ ಮಾಡಲಾಗಿದೆ. ಹೈದರಾಬಾದ್ ಮೂಲದ ವಾಸು ಪಾರ್ಟಿ ಆಯೋಜಿಸಿದ್ದು, ಒಂದು ಬೆಂಜ್ ಕಾರ್ ನಲ್ಲಿ ಆಂಧ್ರ ಶಾಸಕನ ಪಾಸ್ ಪತ್ತೆಯಾಗಿದೆ. ಶಾಸಕ ಕಾಕನಿ ಗೋವರ್ಧನ ರೆಡ್ಡಿ ಹೆಸರಿನ ಪಾಸ್ ಪತ್ತೆಯಾಗಿದೆ. ಪೊಲೀಸರ ದಾಳಿ ವೇಳೆ 15ಕ್ಕೂ ಹೆಚ್ಚು ಕಾರ್ ಗಳು ಕಂಡುಬಂದಿವೆ. ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

Latest Indian news

Popular Stories