ರಾಜ್ಯದಲ್ಲಿ 3 ದಿನ ಕಾಲ ಬಿಸಿ ಗಾಳಿ ಸಾಧ್ಯತೆ: ಏ.30ರಿಂದ 3 ದಿನ ಮಳೆ

ಬೆಂಗಳೂರು(ಏ.27): ಉಷ್ಣ ಅಲೆಯ ನಡುವೆ ಏ.30ರಿಂದ ಮೂರು ದಿನ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಏ.27ರಿಂದ 29ರ ವರೆಗೆ ರಾಜ್ಯಾದ್ಯಂತ ಒಣ ಹವೆ ಇರಲಿದ್ದು, ರಾಯಚೂರು, ಯಾದಗಿರಿ, ಕಲಬುರಗಿ, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಬೀದರ್‌, ವಿಜಯನಗರ, ಗದಗ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಹಾವೇರಿ, ಮೈಸೂರು ಹಾಗೂ ಮಂಡ್ಯದಲ್ಲಿ ಬಿಸಿ ಗಾಳಿ ಬೀಸುವ ಸಾಧ್ಯತೆ ಇದೆ.

ಏ.30ರಿಂದ ಬೀದರ್‌, ಕಲಬುರಗಿ, ಯಾದಗಿರಿ, ವಿಜಯಪುರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಮೈಸೂರು ಹಾಗೂ ಚಿತ್ರದುರ್ಗ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಂಭವವಿದೆ ಎಂದು ಮುನ್ಸೂಚನೆ ನೀಡಿದೆ. ಶುಕ್ರವಾರ ಬೆಳಗ್ಗೆ 8.30ಕ್ಕೆ ಹವಾಮಾನ ಇಲಾಖೆ ನೀಡಿರುವ ವರದಿ ಪ್ರಕಾರ, ಕಲಬುರಗಿಯಲ್ಲಿ ಅತಿ ಹೆಚ್ಚು 41.8 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದ್ದು, ರಾಜ್ಯಾದ್ಯಂತ ಒಣ ಹವೆ ಇತ್ತು ಎಂದು ತಿಳಿಸಿದೆ.

ತಾಪಮಾನ ಹೆಚ್ಚಳ: ಭಾರತ ಹವಾಮಾನ ಇಲಾಖೆ (ಐಎಂಡಿ) ಪ್ರಸಕ್ತ ವರ್ಷದಲ್ಲಿ ಅತಿ ಹೆಚ್ಚು ತಾಪಮಾನ ಕುರಿತು ಹೊರಡಿಸಿದ ಮುನ್ಸೂಚನೆ ಅನ್ವಯ ದೇಶದ ಹೆಚ್ಚಿನ ಭಾಗಗಳಲ್ಲಿ ಸಾಮಾನ್ಯ ಗರಿಷ್ಠ ತಾಪಮಾನ ಸೂಚಿಸಿದೆ. ಪ್ರಸ್ತುತ ರಾಜ್ಯದ ಉತ್ತರ ಒಳನಾಡು, ದಕ್ಷಿಣ ಒಳನಾಡು ಕರಾವಳಿ ಪ್ರದೇಶಗಳ ಕೆಲವು ಭಾಗಗಳಲ್ಲಿ ಸಾಮಾನ್ಯ ತಾಪಮಾನಕ್ಕಿಂತ 2-3 ಡಿಗ್ರಿಗಳಷ್ಟು ಅಧಿಕ ತಾಪಮಾನ ದಾಖಲಾಗುತ್ತಿದ್ದು, ಇದು ಮಾನವ ಹಾಗೂ ಪ್ರಾಣಿಗಳ ಆರೋಗ್ಯಕ್ಕೆ ಹಾನಿಕಾರಕ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Latest Indian news

Popular Stories