ಆರ್ಥಿಕ ಸಾಮರ್ಥ್ಯ ಆಧರಿಸಿ ಮಗು ಸುಪರ್ದಿ ನಿರ್ಧರಿಸಲಾಗುವುದಿಲ್ಲ-ಹೈಕೋರ್ಟ್ ಆದೇಶ

ಬೆಂಗಳೂರು ಏಪ್ರಿಲ್‌18: ಮಗುವಿನ ಸುಪರ್ದಿ ವಿಚಾರವನ್ನು ನಿರ್ಧರಿಸಲು ಪತಿ ಅಥವಾ ಪತ್ನಿಯ ಆರ್ಥಿಕ ಸಾಮರ್ಥ್ಯ ಆಧಾರವಾಗುವುದಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ಅಲ್ಲದೇ ಹಣಕಾಸಿನ ಸಾಮರ್ಥ್ಯ ಹೊಂದಿರುವುದರಿಂದ 14 ವರ್ಷದ ಅಪ್ರಾಪ್ತ ಪುತ್ರಿಯನ್ನು ಶಾಶ್ವತವಾಗಿ ತನ್ನ ಸುಪರ್ದಿಗೆ ನೀಡಲು ಪತ್ನಿಗೆ ಆದೇಶಿಸುವಂತೆ ಕೋರಿ ವ್ಯಕ್ತಿಯೊಬ್ಬರು ಸಲ್ಲಿಸಿದ್ದ ಮೇಲ್ಮನವಿ ವಜಾಗೊಳಿಸಿದೆ.

ಬೆಂಗಳೂರಿನ ವ್ಯಕ್ತಿಯೊಬ್ಬರು ಮಗಳನ್ನು ತನ್ನ ಸುಪರ್ದಿಗೆ ನೀಡುವಂತೆ ಕೋರಿ ಸಲ್ಲಿಸಿದ ಅರ್ಜಿ ವಜಾಗೊಳಿಸಿದ ಕೌಟುಂಬಿಕ ನ್ಯಾಯಾಲಯ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ ಹಿರಿಯ ನ್ಯಾಯಮೂರ್ತಿ ಅನು ಶಿವರಾಮನ್‌ ಮತ್ತು ನ್ಯಾಯಮೂರ್ತಿ ಅನಂತ ರಾಮನಾಥ ಹೆಗ್ಡೆ ಅವರಿದ್ದ ವಿಭಾಗೀಯ ಪೀಠ ಈ ಆದೇಶ ಮಾಡಿದೆ.

ಅಲ್ಲದೇ, ಅಪ್ರಾಪ್ತ ಮಗಳನ್ನು ಮೇಲ್ಮನವಿದಾರನ ವಶಕ್ಕೆ ನೀಡಲು ನಿರಾಕರಿಸಿದ ಹೈಕೋರ್ಟ್‌, ಮಗಳ ಭೇಟಿ ಹಕ್ಕು ನೀಡಲು ಮತ್ತು ಮಗಳಿಗೆ ಉತ್ತಮ ಶಿಕ್ಷಣದ ವ್ಯವಸ್ಥೆಗೆ ಹಣಕಾಸಿನ ಸೌಲಭ್ಯ ಒದಗಿಸಲು ಅವಕಾಶ ಕೋರಿ ಕೌಟುಂಬಿಕ ನ್ಯಾಯಾಲಯದ ಮೊರೆ ಹೋಗಲು ಮೇಲ್ಮನವಿದಾರ ಸ್ವತಂತ್ರರಾಗಿದ್ದಾರೆ ಎಂದು ಸ್ಪಷ್ಟಪಡಿಸಿದೆ.

Latest Indian news

Popular Stories