ಬೆಂಗಳೂರು: ಮೀನುಗಾರರ ಮೇಲೆ ವಿಶೇಷ ಕಾಳಜಿ ವಹಿಸಿರುವ ರಾಜ್ಯ ಕಾಂಗ್ರೆಸ್ಸರ್ಕಾರ, ಮೀನುಗಾರರ ರಕ್ಷಣೆಗೆಂದೇ ಸಮುದ್ರ ಆಂಬ್ಯುಲೆನ್ಸ್ ಯೋಜನೆಯನ್ನು ಬಜೆಟ್ ಮಂಡನೆ ವೇಳೆ ಘೋಷಿಸಿದೆ.
ಇಂದು 15ನೇಯ ದಾಖಲೆ ಬಜೆಟ್ ಮಂಡನೆ ಮಾಡಿದ ಸಿಎಂ ಸಿದ್ದರಾಮಯ್ಯ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷವಾಗಿ 3 ಸಾವಿರ ಕೋಟಿ ರೂಪಾಯಿ ಯೋಜನೆಯನ್ನು ಘೋಷಣೆ ಮಾಡಿದರು.
ಸಮುದ್ರದಲ್ಲಿ ಮೀನುಗಾರಿಕೆಯನ್ನು ನೆಚ್ಚಿಕೊಂಡಿರುವ ಮೀನುಗಾರರ ರಕ್ಷಣೆಗೆ ವಿಶೇಷ ಗಮನ ವಹಿಸಲಾಗುವುದು. ಯಾವುದೇ ತುರ್ತು ಸಂದರ್ಭಗಳಲ್ಲಿ ಮೀನುಗಾರರ ಜೀವ ಉಳಿಸಲು ಅತ್ಯಾಧುನಿಕ ಸಮುದ್ರ ಆಂಬ್ಯುಲೆನ್ಸ್ ಖರೀದಿ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಉತ್ತರ ಕನ್ನಡದ ಹೊನ್ನಾವರ ಅಥವಾ ಕಾಸರಗೋಡಿನಲ್ಲಿ ಮೀನುಗಾರಿಕೆ ಸಂಶೋಧನಾ ಕೇಂದ್ರ ಸ್ಥಾಪನೆ ಮಾಡಲಾಗುವುದು. ಶಿವಮೊಗ್ಗದ ಭದ್ರಾವತಿಯಲ್ಲಿ ಅತ್ಯಾಧುನಿಕ ಮೀನು ಮಾರುಕಟ್ಟೆಯನ್ನು ಸ್ಥಾಪಿಸಲಾಗುವುದು ಎಂದು ತಿಳಿಸಿದರು.