ಬೆಂಗಳೂರು: ‘ನಮ್ಮ ಮೆಟ್ರೋ’ ಟಿಕೆಟ್ ದರ ಕಡಿಮೆ ಮಾಡುವಂತೆ ಸಿಎಂ ಸಿದ್ದರಾಮಯ್ಯ ಅವರು ಟ್ವೀಟ್ ಮೂಲಕ ಬಿಎಂಆರ್ ಸಿಎಲ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್ಸಿಎಲ್) ಬೆಂಗಳೂರು ಮೆಟ್ರೋ ಪ್ರಯಾಣ ದರ ಪರಿಷ್ಕರಣೆಯನ್ನು ಜಾರಿಗೆ ತಂದ ರೀತಿ ಅಸಂಗತತೆಗೆ ಕಾರಣವಾಗಿದೆ, ಕೆಲವು ವಿಭಾಗಗಳಲ್ಲಿ ದರಗಳು ದ್ವಿಗುಣಗೊಂಡಿವೆ.
ಈ ಸಮಸ್ಯೆಗಳನ್ನು ತುರ್ತಾಗಿ ಪರಿಹರಿಸಲು ಮತ್ತು ಟಿಕೆಟ್ ದರಗಳನ್ನು ಕಡಿಮೆ ಮಾಡಲು ನಾನು ಬಿಎಂಆರ್ಸಿಎಲ್ ಎಂಡಿಗೆ ಕೇಳಿದ್ದೇನೆ. ಪ್ರಯಾಣಿಕರ ಹಿತಾಸಕ್ತಿಯನ್ನು ಕಾಪಾಡಬೇಕು ಎಂದು ಟ್ವೀಟ್ ಮಾಡಿದ್ದಾರೆ.
ರಾಜ್ಯ ರಾಜಧಾನಿ ಬೆಂಗಳೂಗರಿಗೆ ಒಂದಾದ ಮೇಲೊಂದರಂತೆ ಬೆಲೆ ಏರಿಕೆ ಬಿಸಿ ತಟ್ಟಿದೆ. ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಎಂ ಆರ್ ಸಿ ಎಲ್ ಬಿಗ್ ಶಾಕ್ ನೀಡಿದ್ದು ಮೆಟ್ರೋ ಪ್ರಯಾಣ ದರ ಹೆಚ್ಚಳ ಮಾಡಿ ಆದೇಶಿಸಿದೆ. ಮೆಟ್ರೋ ದರ ಹೆಚ್ಚಳಕ್ಕೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.