ಬೆಂಗಳೂರು: ಜನಸಾಮಾನ್ಯರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ಮಹತ್ವದ ನಿರ್ಧಾರ ಕೈಗೊಂಡಿದ್ದು, ಇನ್ಮುಂದೆ ನಾನು ಜೀರೋ ಟ್ರಾಫಿಕ್ ಬಳಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ರಾಜ್ಯ ಪೊಲೀಸ್ ಕಚೇರಿಯಲ್ಲಿ ಶನಿವಾರ ನಡೆದ ಐಪಿಎಸ್ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಜನಸಾಮಾನ್ಯರಿಗೆ ತೊಂದರೆ ಕೊಟ್ಟು ಜೀರೋ ಟ್ರಾಫಿಕ್ ವ್ಯವಸ್ಥೆಯಲಿ ಓಡಾಡುತ್ತಿಲ್ಲ.
ಪೊಲೀಸರೇ ನಾನು ಸಂಚರಿಸುವ ವೇಳೆ ಬೇರೆ ವಾಹನಗಳ ಓಡಾಟಕ್ಕೆ ನಿರ್ಬಂಧಿಸುತ್ತಾರೆ. ನಾನು ಯಾವತ್ತೂ ಜೀರೋ ಟ್ರಾಫಿಕ್ ಕೇಳಿಲ್ಲ ಎಂದು ಹೇಳಿದ್ದಾರೆ.
ಇನ್ನು ಜೊತೆಯಲ್ಲೇ ಇದ್ದ ಗೃಹಸಚಿವ ಡಾ.ಜಿ. ಪರಮೇಶ್ವರ್ ಅವರೂ ಸಹ ನನಗೂ ಸಹ ಇನ್ಮುಂದೆ ಜೀರೋ ಟ್ರಾಫಿಕ್ ಬೇಡ ಎಂದು ಸ್ಪಷ್ಟಪಡಿಸಿದ್ದಾರೆ.