ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಮೂರು ಕಾಸಿನ ಕಿಮ್ಮತ್ತಿಲ್ಲ – ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಆರು ತಿಂಗಳಲ್ಲಿ ಪತನವಾಗಲಿದೆ ಎಂಬ ಹೇಳಿಕೆಯನ್ನು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ನೀಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಅವರ ಮಾತಿಗೆ ಮೂರು ಕಾಸಿನ ಕಿಮ್ಮತ್ತಿಲ್ಲ ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ, ಕುಮಾರಸ್ವಾಮಿ ಮಾತಿಗೆ ಬೆಲೆ ಇದ್ಯಾl
ಅವರು ಭ್ರಮೆಯಲ್ಲಿ ಇದ್ದಾರೆ. ಹಾಗಾಗಿ ಏನೇನೋ ಮಾತಾಡ್ತಿದ್ದಾರೆ ಎಂದು ಹೇಳಿದರು.

ಕುಮಾರಸ್ವಾಮಿ ಚುನಾವಣೆಯಲ್ಲಿ ಸಮ್ಮಿಶ್ರ ಸರ್ಕಾರ ಬರತ್ತೆ, ನಾನೇ ಸಿಎಂ ಆಗಿ ಬಿಡ್ತಿನಿ ಎಂಬ ಭ್ರಮೆಯಲ್ಲಿದ್ದರು. ಆದರೆ ಹಾಗಾಗಲಿಲ್ಲ. ಅದೇ ಭ್ರಮೆಯಲ್ಲಿ ಈಗಲೂ ಚಡಪಡಿಸುತ್ತಾ ಏನೇನೋ ಮಾತಾಡ್ತಿದ್ದಾರೆ ಪಾಪ ಎಂದು ತಿರುಗೇಟು ನೀಡಿದರು.

Latest Indian news

Popular Stories