ಕಾಂಗ್ರೆಸ್ ಅಧ್ಯಕ್ಷರ ಮನೆಗೆ ಬಿಗಿ ಭದ್ರತೆ

ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆ ಮತ ಎಣಿಕೆಯಲ್ಲಿ ಬಿಜೆಪಿ ಮೂರು ರಾಜ್ಯಗಳಲ್ಲಿ ಮುನ್ನಡೆ ಪಡೆದುಕೊಂಡಿದ್ದರೆ, ಕಾಂಗ್ರೆಸ್ ತೆಲಂಗಾಣದಲ್ಲಿ ಬಹುಮತ ಪಡೆಯುವ ಸಾಧ್ಯತೆ ದಟ್ಟವಾಗಿದೆ.ತೆಲಂಗಾಣದಲ್ಲಿ ಕಾಂಗ್ರೆಸ್ ಗೆಲ್ಲುವ ಎಲ್ಲಾ ಸಾಧ್ಯತೆ ಇದ್ದು, ಈಗಾಗಲೇ 66 ಸ್ಥಾನಗಳಲ್ಲಿ ಮುನ್ನಡೆ ಪಡೆದುಕೊಂಡಿದೆ.

ಕಾಂಗ್ರೆಸ್ ಕಾರ್ಯಕರ್ತರು ಈಗಾಗಲೇ ಸಂಭ್ರಮಾಚರಣೆ ಆರಂಭಿಸಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ರೇವಂತ್ ರೆಡ್ಡಿ ಮನೆಗೆ ಭದ್ರತೆ ಹೆಚ್ಚಿಸಲಾಗಿದೆ.ರೇವಂತ್ ರೆಡ್ಡಿ ಕಾಂಗ್ರೆಸ್‌ನ ಪ್ರಭಾವಿ ನಾಯಕರಾಗಿದ್ದು, ಕಾಂಗ್ರೆಸ್ ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.
ರೇವಂತ್ ಸ್ಪರ್ಧಿಸಿರುವ ಕೊಡಂಗಲ್ ಮತ್ತು ಕಾಮರೆಡ್ಡಿ ಎರಡು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.

ಕಾಂಗ್ರೆಸ್ ಬಹುಮತದತ್ತ ಸಾಗುತ್ತಿರುವ ಹಿನ್ನಲೆಯಲ್ಲಿ ರೇವಂತ್ ರೆಡ್ಡಿಗೆ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ. ರೇವಂತ್ ರೆಡ್ಡಿ ಮನೆ ಬಳಿ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ.

ಎಕ್ಸಿಟ್ ಪೋಲ್‌ನಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನ ಪಡೆಯಲಿದೆ ಎಂದು ತಿಳಿದ ನಂತರ ರೇವಂತ್ ರೆಡ್ಡಿ ಮನೆಗೆ ಭಾರೀ ಭದ್ರತೆ ಏರ್ಪಡಿಸಲಾಗಿತ್ತು. ಶನಿವಾರ ರೇವಂತ್ ಮನೆಗೆ ಪೊಲೀಸರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು. ಹಿಂದೆಂದಿಗಿಂತಲೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿತ್ತು. ಕಾಂಗ್ರೆಸ್ ಕಾರ್ಯಕರ್ತರು ಹಾಗೂ ರೇವಂತ್ ಹಿಂಬಾಲಕರು ಈಗಾಗಲೇ ಸಂಭ್ರಮಾಚರಣೆ ಆರಂಭಿಸಿದ್ದಾರೆ. ರೇವಂತ್ ಮನೆಯಲ್ಲಿ ಪಟಾಕಿ ಸಿಡಿಸುವ ಮೂಲಕ ಸಂಭ್ರಮಾಚರಣೆ ಆರಂಭವಾಗಿದೆ.

Latest Indian news

Popular Stories