ಜಿಹಾದಿಗಳಿಗೆ ‘ಪಾಸ್‌ಪೋರ್ಟ್‌’ ಗಲಭೆಕೋರರಿಗೆ ‘ವೀಸಾ’ ನೀಡುವ ಕಾಂಗ್ರೆಸ್: ಬಿಜೆಪಿ

ಬೆಂಗಳೂರು ಏಪ್ರಿಲ್ 19: ಕರ್ನಾಟಕದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಬಂದ ನಂತರ ಜಿಹಾದಿ ಕರ್ನಾಟಕ ಸೃಷ್ಟಿಯಾಗಿದೆ. ಹಿಂದೂಗಳ ರಕ್ತಕ್ಕೆ ಬೆಲೆಯೇ ಇಲ್ಲ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದರು.

ಶುಕ್ರವಾರ ಬಿಜೆಪಿ ಕಚೇರಿಯಲ್ಲಿ ಕಾಂಗ್ರೆಸ್ ದುರಾಡಳಿತದ ಆರೋಪ ಪಟ್ಟಿ ಬಿಡುಗಡೆ ಮಾಡಿ ಅವರು ಮಾತನಾಡಿದರು. ರಾಜ್ಯದಲ್ಲಿ ಹಿಂದೂಗಳ ಕಗ್ಗೊಲೆ, ಲವ್‌ ಜಿಹಾದ್‌, ಹಿಂದೂಗಳ ಮೇಲೆ ದಾಳಿ ನಡೆಯುತ್ತಿದೆ. ಲವ್‌ ಜಿಹಾದ್‌ಗೆ ಕಾಂಗ್ರೆಸ್‌ನವರು ಕೂಡ ಒಳಗಾಗಿದ್ದಾರೆ.

ಹುಬ್ಬಳ್ಳಿಯಲ್ಲಿ ನಡೆದ ಲವ್‌ ಜಿಹಾದ್‌ನಲ್ಲಿ ಹಿಂದೂ ಯುವತಿ ಬರ್ಬರ ಕೊಲೆಗೀಡಾಗಿರುವುದನ್ನು ಬಿಜೆಪಿ ಉಗ್ರವಾಗಿ ವಿರೋಧಿಸುತ್ತದೆ. ಕರ್ನಾಟಕವನ್ನು ಡಾನ್‌ಗಳು ನಡೆಸುತ್ತಿರುವಂತಹ ಪರಿಸ್ಥಿತಿ ಇದ್ದು, ಸರ್ಕಾರ ಕಾನೂನನ್ನು ಗೂಂಡಾಗಳಿಗೆ ನೀಡಿದೆ ಎಂದು ವಾಗ್ದಾಳಿ ನಡೆಸಿದರು.

ಕುಟುಂಬದ ಸಮಸ್ಯೆ ಎನ್ನುವವರಿಗೆ ನಾಚಿಕೆ ಆಗಬೇಕು ಇದನ್ನು ಲವ್‌ ಪ್ರಕರಣ, ಕುಟುಂಬದ ಸಮಸ್ಯೆ ಎಂದು ಹೇಳುವ ಕಾಂಗ್ರೆಸ್‌ ನಾಯಕರಿಗೆ ನಾಚಿಕೆಯಾಗಬೇಕು. ಇದು ಲವ್‌ ಜಿಹಾದ್‌ ಎಂದು ಯುವತಿಯ ತಂದೆ, ಕಾಂಗ್ರೆಸ್‌ ಕಾರ್ಪೊರೇಟರ್‌ ಹೇಳುತ್ತಿದ್ದಾರೆ. ಕುಟುಂಬದವರು ಕಣ್ಣೀರು ಹರಿಸುವಾಗ ಕೊಲೆಯಾದ ಯುವತಿಯ ಬಗ್ಗೆ ಹೀನಾಯವಾಗಿ ಮಾತಾಡುತ್ತಿದ್ದಾರೆ.

ಚುನಾವಣೆಯಲ್ಲಿ ಇದು ಚರ್ಚೆಯಾದರೆ ಕಾಂಗ್ರೆಸ್‌ ಮುಖಕ್ಕೆ ಮಂಗಳಾರತಿಯಾಗಲಿದೆ ಎಂಬ ಕಾರಣಕ್ಕೆ ಸಿದ್ದರಾಮಯ್ಯನವರೇ ಈ ರೀತಿ ಮಾತಾಡುತ್ತಿದ್ದಾರೆ. ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲದಂತೆ ಸರ್ಕಾರ ನಡೆದುಕೊಳ್ಳುತ್ತಿದೆ ಎಂದರು.

Latest Indian news

Popular Stories