ಬೆಂಗಳೂರು: ಕೊಚಿಮುಲ್ ನೇಮಕಾತಿಯಲ್ಲಿ ಅವ್ಯವಹಾರ ನಡೆದಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕೋಲಾರ-ಚಿಕ್ಕಬಳ್ಳಾಪುರ ಹಾಲು ಒಕ್ಕೂಟ ಕೋಚಿಮುಲ್ ದ ಅಧ್ಯಕ್ಷ, ಮಾಲೂರು ಕಾಂಗ್ರೆಸ್ ಶಾಸಕ ಕೆ.ವೈ.ನಂಜೇಗೌಡಗೆ ಫೆಬ್ರವರಿ 23ರಂದು ವಿಚಾರಣೆಗೆ ಹಾಜರಾಗುವಂತೆ ಇಡಿ ಸಮನ್ಸ್ ನೀಡಿದೆ ಎಂದು ಹೇಳಲಾಗುತ್ತಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಜನವರಿ 8ರಂದು ಶಾಸಕ ಕೆ.ವೈ.ನಂಜೇಗೌಡ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ದಾಳಿ ಮಾಡಿದ್ದರು. ಈ ವೇಳೆ ನಂಜೇಗೌಡ ಅವರಿಗೆ ಸೇರಿದ ನಾಲ್ಕು ಕಡೆಗಳಲ್ಲಿ ಇಡಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದರು.
ಮಾಲೂರು ತಾಲೂಕಿನ ಕೊಮ್ಮನಹಳ್ಳಿ ಗ್ರಾಮದಲ್ಲಿರುವ ಮನೆ, ಹುತ್ತೂರು ಹೋಬಳಿ ಕೋಚಿಮುಲ್ ಕಚೇರಿಯಲ್ಲಿ, ಕೊಮ್ಮನಹಳ್ಳಿ ನಂಜುಂಡೇಶ್ವರ ಸ್ಟೋನ್ ಕ್ರಷರ್ನಲ್ಲಿ ಪರಿಶೀಲನೆ ನಡೆಸಿದ್ದಾರೆ. ಕೋಚಿಮುಲ್ ನೇಮಕಾತಿಯಲ್ಲಿ ಅವ್ಯವಹಾರ ನಡೆದಿದೆ ಆರೋಪ ಹಿನ್ನೆಲೆಯಲ್ಲಿ ದಾಳಿ ಮಾಡಿದ್ದರು. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ 23ರಂದು ವಿಚಾರಣೆಗೆ ಹಾಜರಾಗುವಂತೆ ಈಡಿ ಸಮನ್ಸ್ ಜಾರಿ ಮಾಡಿದೆ