ಕಾಂಗ್ರೆಸ್‌ ಭವಿಷ್ಯದಲ್ಲಿ ನನ್ನನ್ನು ಸಿಎಂ ಮಾಡಲಿದೆ

ಬೆಂಗಳೂರು ಮಾರ್ಚ್ 28: ಕರ್ನಾಟಕ ರಾಜ್ಯ ಸರ್ಕಾರದಲ್ಲಿ ನಾಯಕತ್ವ ಬದಲಾವಣೆ ಗಾಳಿ ಮತ್ತೆ ಬೀಸಿದೆ. ನಾಯಕತ್ವ ಬದಲಾವಣೆ ವಿಚಾರ ಮುನ್ನೆಲೆಗೆ ತರುವ ಮೂಲಕ ಭವಿಷ್ಯದಲ್ಲಿ ಕಾಂಗ್ರೆಸ್ ಪಕ್ಷವು ನನ್ನನ್ನು ಮುಖ್ಯಮಂತ್ರಿಯನ್ನಾಗಿ ಮಾಡಲು ನಿರ್ಧರಿಸಲಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.

2023ರಲ್ಲಿ ಮೇ ತಿಂಗಳಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಪಡೆದ ಬಳಿಕ ಕಾಂಗ್ರೆಸ್‌ನಯಲ್ಲಿ ಸಿಎಂ ಯಾರು? ಎಂಬ ಪ್ರಶ್ನೆ ಉದ್ಭವವಾಗಿತ್ತು. ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಮತ್ತು ಶಿವಕುಮಾರ್ ಮಧ್ಯೆ ಸಿಎಂ ಸ್ಥಾನಕ್ಕೆ ತೀವ್ರ ಪೈಪೋಟಿ ಏರ್ಪಟ್ಟಿತ್ತು. ಈ ವೇಳೆ ಕಾಂಗ್ರೆಸ್ ವರಿಷ್ಠರು ಡಿಕೆ ಶಿವಕುಮಾರ್ ಅವರನ್ನು ಮನವೊಲಿಸುವಲ್ಲಿ ಯಶಸ್ವಿಯಾದರು. ಅದರಂತೆ ಅವರನ್ನು ಡಿಸಿಎಂ ಮಾಡಲಾಯಿತು.

ಅರ್ಧ ಅವಧಿಗೆ ಒಬ್ಬ ಮುಖ್ಯಮಂತ್ರಿ ಸೂತ್ರದ ಆಧಾರದಲ್ಲಿ ಮನವೊಲಿಸಲಾಗಿದೆ ಎಂದೆಲ್ಲ ಆಗ ವರದಿ ಆದವು. ಅದರ ಪ್ರಕಾರ ಮುಂದಿನ ಎರಡೂವರೆ ವರ್ಷದ ಬಳಿಕ ಡಿಸಿಎಂ ಡಿಕೆ ಶಿವಕುಮಾರ್ ಸಿಎಂ ಆಗಲಿದ್ದಾರೆ ಎಂಬ ಮಾತುಗಳು ಕೇಳಿ ಬಂದವು. ಇದೀಗ ಒಂದು ವರ್ಷ ಪೂರೈಸುವ ಹೊತ್ತಿಗೆ ಸ್ವತಃ ಡಿಸಿಎಂ ಅವರೇ ಈ ವಿಚಾರವನ್ನು ಮುನ್ನೆಲೆಗೆ ತಂದಿದ್ದಾರೆ.

Latest Indian news

Popular Stories