
Bengaluru UrbanFeatured Story
ಬೆಂಗಳೂರು :ಹಸುಗೂಸು ಮಾರಾಟ ಪ್ರಕರಣದ ಬಗ್ಗೆ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ -ಸ್ಪೋಟಕ ಮಾಹಿತಿ
ಬೆಂಗಳೂರು: ನಗರದ ಆರ್ ಆರ್ ನಗರದಲ್ಲಿ ಹಸುಗೂಸು ಮಾರಾಟ ಪ್ರಕರಣ ಸಂಬಂಧ ಮಹತ್ವದ ಮಾಹಿತಿಯನ್ನು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಬಿಟ್ಟಿಟ್ಟಿದ್ದಾರೆ.
ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ 20 ದಿನದ ಹಸುಗೂಸು ಮಾರಾಟ ಮಾಡುತ್ತಿದ್ದ ಮಾಹಿತಿ ಬಂದ ಕೂಡಲೇ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.ಸ್ವಿಫ್ಟ್ ಕಾರಿನಲ್ಲಿ ಮಾರಾಟ ಮಾಡುತ್ತಿದ್ದಂತ ಗಂಡು ಮಗುವನ್ನು ರಕ್ಷಿಸಿದ್ದಾರೆ.ಬಂಧಿತ ಆರೋಪಿಗಳು ಮೂಲತಹ ತಮಿಳುನಾಡು ಮೂಲದವರು. ಬಡ ಮಹಳೆಯರಿಗೆ ಗರ್ಭಧಾರಣೆ ಮಾಡಿಸಿ ಮಗು ಪಡೆಯುತ್ತಿದ್ದರು. ಆ ಮಗುವನ್ನು 8 ರಿಂದ 10 ಲಕ್ಷಕ್ಕೆ ಮಾರಾಟ ಮಾಡುತ್ತಿದ್ದರು. ಹೀಗೆ ಹತ್ತಕ್ಕು ಹೆಚ್ಚು ಮಕ್ಕಳನ್ನು ಮಾರಾಟ ಮಾಡಿರೋ ಬಗ್ಗೆ ಮಾಹಿತಿ ಇದೆ. ಆ ನಿಟ್ಟಿನಲ್ಲಿ ಆರ್ ಆರ್ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಯುತ್ತಿದೆ.




