Bengaluru UrbanFeatured Story

ಬರ ಘೋಷಣೆ ಮಾಡಿರುವುದರಿಂದ ಮುಂದೆ ಯಾವುದೇ ಬೆಳೆ ಹಾಕಬಾರದು – ಡಿ ಕೆ ಶಿವಕುಮಾರ್

ಬೆಂಗಳೂರು (ಅ.07): ಬರ ಘೋಷಣೆ ಮಾಡಿರುವುದರಿಂದ ಮುಂದೆ ಯಾವುದೇ ಬೆಳೆ ಹಾಕಬಾರದು ಎಂಬುದಾಗಿ ತಿಳಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,
ರಾಜ್ಯದ ರೈತರ ಹಾಲಿ ಬೆಳೆಗಳನ್ನು ರಕ್ಷಣೆ ಮಾಡಿದ್ದು ಸಮಾಧಾನದ ವಿಷಯವಾಗಿದೆ. ಬರ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಮುಂದೆ ಯಾವುದೇ ಬೆಳೆ ಹಾಕಬಾರದು ಎಂದು ರೈತರಿಗೆ ತಿಳಿಸಲಾಗಿದೆ. ಮುಂದಿನ ತಿಂಗಳು ಮತ್ತೆ ಮಳೆಯಾಗುವ ಸಾಧ್ಯತೆ ಇದೆ. ಈ ವರ್ಷ ಸಂಕಷ್ಟದ ವರ್ಷವಾಗಿದೆ ಎಂದು ಹೇಳಿದರು. ತಮಿಳುನಾಡಿಗೆ 3 ಸಾವಿರ ಕ್ಯುಸೆಕ್‌ ನೀರು ಹರಿಬಿಡಲು ನಮ್ಮಲ್ಲಿ ನೀರಿಲ್ಲ ಎಂದು ಮೇಲ್ಮನವಿ ಸಲ್ಲಿಸಿದ್ದೇವೆ ಎಂದರು.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button