
Bengaluru UrbanFeatured Story
ಡಿಕೆ ಶಿವಕುಮಾರ್ ಅವರು ಉಪಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು – ಕೋಟ ಶ್ರೀನಿವಾಸ್ ಪೂಜಾರಿ
ಬೆಂಗಳೂರು:ಪ್ರಜಾಪ್ರಭುತ್ವದಲ್ಲಿ ಆರೋಪಗಳು ಬಂದಾಗ ರಾಜೀನಾಮೆ ಅನಿವಾರ್ಯ.ಡಿಕೆ ಶಿವಕುಮಾರ್ ಅವರು ಉಪಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಕೋಟ ಶ್ರೀನಿವಾಸ್ಆ ಪೂಜಾರಿ ಅಗ್ರಹಿಸಿದ್ದಾರೆ.
ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ಹೈಕೋರ್ಟ್ ಸಮ್ಮತಿ ನೀಡಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಶಿವಕುಮಾರ್ ಅವರು ತಮ್ಮ ಹುದ್ದೆಗೆ ರಾಜೀನಾಮೆ ಕೊಡಬೇಕೆಂಬುದು ಬಿಜೆಪಿ ಆಗ್ರಹ. 2011ರಲ್ಲಿ ತನಿಖೆಗೆ ಅನುಮತಿ ನೀಡಿದ ಕಾರಣ ಬಿಎಸ್ ಯಡಿಯೂರಪ್ಪ ರಾಜೀನಾಮೆ ನೀಡಿದ್ದರು. ಪ್ರಜಾಪ್ರಭುತ್ವದಲ್ಲಿ ಆರೋಪಗಳು ಬಂದಾಗ ರಾಜೀನಾಮೆ ಅನಿವಾರ್ಯ ಎಂದಿದ್ದಾರೆ.
ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ FIR ದಾಖಲು ವಿಚಾರವಾಗಿ ರಾಜ್ಯ ಕಾಂಗ್ರೆಸ್ ಸರ್ಕಾರ ಸ್ವೇಚ್ಛಾಚಾರಿಯಾಗಿ ನಡೆದುಕೊಳ್ಳುತ್ತಿದೆ ಎಂದು ಬೆಂಗಳೂರಿನಲ್ಲಿ ಬಿಜೆಪಿ ಎಂಎಲ್ಸಿ ಕೋಟ ಶ್ರೀನಿವಾಸ ಪೂಜಾರಿ ಹೇಳಿಕೆ ನೀಡಿದರು.




