Bengaluru UrbanFeatured Story

ಪಾದಚಾರಿ ಮೇಲೆ ಹರಿದ ಸ್ಕೂಲ್ ಬಸ್; ವ್ಯಕ್ತಿ ಮೃತ್ಯು

ಬೆಂಗಳೂರು:ಶಾಲಾ ವಾಹನದಲ್ಲಿ 25 ಮಕ್ಕಳನ್ನು ಕೂರಿಸಿಕೊಂಡು ಚಾಲಕನೊಬ್ಬ ಕುಡಿದ ಅಮಲಿನಲ್ಲಿ ವಾಹನ ಚಲಾಯಿಸಿದ ಪರಿಣಾಮ ಬಸ್ ವ್ಯಕ್ತಿಯೊಬ್ಬನಿಗೆ ಡಿಕ್ಕಿ ಹೊಡೆಡಿದೆ. ಈ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಮೃತಾಪಟ್ಟಿದ್ದಾನೆ.

ಕಂಠಪೂರ್ತಿ ಕುಡಿದು ಶಾಲಾ ವಾಹನ ಚಾಲನೆ ಮಾಡುತ್ತಿದ್ದ ಡ್ರೈವರ್ ಮೆಡಿಕಲ್ ಶಾಪ್ ನಿಂದ ಔಷಧಿ ಖರೀದಿಸಿ ಬರುತ್ತಿದ್ದ ವ್ಯಕ್ತಿಯೋರ್ವರಿಗೆ ಡಿಕ್ಕಿ ಹೊಡೆದಿದ್ದಾರೆ.ಸ್ಥಳದಲ್ಲೇ ಕುಸಿದುಬಿದ್ದ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ವ್ಯಕ್ತಿ ಸಾವನ್ನಪ್ಪಿದ್ದಾರೆ. ಆಂಜನಪ್ಪ ಮೃತ ವ್ಯಕ್ತಿ. ಅಪಘಾತದಲ್ಲಿ ಸ್ಕೂಲ್ ಬಸ್ ಇನ್ನೋರ್ವ ಮಹಿಳೆಗೂ ಡಿಕ್ಕಿ ಹೊಡೆದಿದ್ದು, ಅವರು ಕೂಡ ಗಾಯಗೊಂಡಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button