ರಾಜ್ಯದ ‘ಶಾಲಾ ಮಕ್ಕಳಿಗೆ’ ಇಂದಿನಿಂದ ‘ರಾಗಿ ಮಾಲ್ಟ್ ಮಿಶ್ರಿತ ಹಾಲು’ ವಿತರಣೆ

ಬೆಂಗಳೂರು: ರಾಜ್ಯದ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್ ಎನ್ನುವಂತೆ ಇಂದಿನಿಂದ ಶಾಲಾ ಮಕ್ಕಳಿಗೆ ರಾಗಿ ಮಾಲ್ಟ್ ಮಿಶ್ರಿತ ಹಾಲು ವಿತರಣೆ ಮಾಡಲಾಗುತ್ತಿದೆ.

ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸರ್ಕಾರದ ಕ್ಷೀರಭಾಗ್ಯ ಯೋಜನೆಯಡಿ ಪ್ರಸ್ತುತ ವಾರದಲ್ಲಿ ಐದು ದಿನ ಸರ್ಕಾರಿ ಹಾಗೂ ಅನುದಾನಿತ ಶಾಲಾ ಮಕ್ಕಳಿಗೆ ಕೆನೆಭರಿತ ಹಾಲು ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಇನ್ಮುಂದೆ ವಾರದಲ್ಲಿ ಮೂರು ದಿನ ಹಾಲಿಗೆ ನಿರ್ದಿಷ್ಟ ಪ್ರಮಾಣದ ರಾಗಿ ಮಾಲ್ಟ್ ಮಿಶ್ರಣ ಮಾಡಿ ಕೊಡಲಾಗುತ್ತದೆ. ಉಳಿದ ಎರಡು ದಿನಗಳಲ್ಲಿ ಹಾಲನ್ನು ಮಾತ್ರ ನೀಡಲಾಗುತ್ತದೆ ಎಂಬುದಾಗಿ ತಿಳಿಸಿದ್ದಾರೆ.

ಒಟ್ಟಾರೆಯಾಗಿ ಸರ್ಕಾರದ ಕ್ಷೀರಭಾಗ್ಯ ಯೋಜನೆಯಡಿ ಪ್ರಸ್ತುತ ವಾರದಲ್ಲಿ ಐದು ದಿನ ಸರ್ಕಾರಿ ಹಾಗೂ ಅನುದಾನಿತ ಶಾಲಾ ಮಕ್ಕಳಿಗೆ ಕೆನೆಭರಿತ ಹಾಲು ನೀಡಲಾಗುತ್ತದೆ. ಇನ್ನು ಮುಂದೆ ವಾರದಲ್ಲಿ ಮೂರು ದಿನ ಹಾಲಿಗೆ ನಿರ್ದಿಷ್ಟ ಪ್ರಮಾಣದ ರಾಗಿ ಮಾಲ್ಟ್‌ ಮಿಶ್ರಣ ಮಾಡಿ ಕೊಡಲಾಗುತ್ತದೆ. ಉಳಿದ ಎರಡು ದಿನಗಳಲ್ಲಿ ಹಾಲನ್ನು ಮಾತ್ರ ನೀಡಲಾಗುವುದು ಎಂದಿದ್ದಾರೆ.

Latest Indian news

Popular Stories