ಪ್ರೇಮಿಗಳ ದಿನಾಚರಣೆಗೆ ‘ಮದ್ಯ’ ಬಂದ್ ಮಾಡಬೇಡಿ : ಜಿಲ್ಲಾಡಳಿತಕ್ಕೆ ‘ಬಾರ್ ಮಾಲೀಕರ ಸಂಘ’ ಮನವಿ

ಬೆಂಗಳೂರು: ಪ್ರೇಮಿಗಳ ದಿನಾಚರಣೆಗೆ ‘ಮದ್ಯ’ ಬಂದ್ ಮಾಡಬೇಡಿ ಎಂದು ಬಾರ್ ಮಾಲೀಕರ ಸಂಘ ಜಿಲ್ಲಾಡಳಿತಕ್ಕೆ ಮನವಿ ಮಾಡಿದೆ.

ಕರ್ನಾಟಕ ವಿಧಾನ ಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ-2024ರ ಹಿನ್ನೆಲೆಯಲ್ಲಿ ಫೆ.14 ರಿಂದ ಬೆಂಗಳೂರಿನಲ್ಲಿ ಮೂರು ದಿನ ಮದ್ಯ ಮಾರಾಟ ನಿಷೇಧ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ಇದಕ್ಕೆ ಬಾರ್ ಮಾಲೀಕರ ಸಂಘ ವಿರೋಧ ವ್ಯಕ್ತಪಡಿಸಿದೆ. ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಭಾಗವಹಿಸೋದು ಕೇವಲ 16 ಸಾವಿರ ಮತದಾರರಷ್ಟೇ, ಶಿಕ್ಷಕರ ಕ್ಷೇತ್ರದಲ್ಲಿ ಎಲ್ಲರೂ ವಿದ್ಯಾವಂತರೇ ಇರುವ ಕಾರಣ ಸಮಸ್ಯೆ ಆಗುವುದಿ‍ಲ್ಲ.

4 ದಿನ ಮದ್ಯ ಮಾರಾಟ ಬಂದ್ ಮಾಡಿದ್ರೆ ಬೆಂಗಳೂರಲ್ಲೇ 300 ಕೋಟಿ ನಷ್ಟ ಆಗಲಿದೆ. ಸರ್ಕಾರ ಈ ಬಗ್ಗೆ ಚಿಂತನೆ ನಡೆಸಬೇಕಾಗುತ್ತದೆ ಎಂದು ರಾಜ್ಯ ವೈನ್ ಮರ್ಚೆಂಟ್ಸ್ ಅಸೋಸಿಯೇಷನ್ ಉಪಾಧ್ಯಕ್ಷ ಕರುಣಾಕರ್ ಹೆಗ್ಡೆ ಹೇಳಿದ್ದಾರೆ.

ಕರ್ನಾಟಕ ವಿಧಾನ ಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ-2024ರ ಹಿನ್ನೆಲೆಯಲ್ಲಿ ಕರ್ನಾಟಕ ಅಬಕಾರಿ (ಸನ್ನದುಗಳ ಸಾಮಾನ್ಯ ಷರತ್ತುಗಳು) ನಿಯಮಗಳು 1967ರ ನಿಯಮ -10(ಬಿ) ರನ್ವಯ ಹಾಗೂ ಪ್ರಜಾ ಪ್ರತಿನಿಧಿ ಕಾಯ್ದೆ 1951ರ ಸೆಕ್ಷನ್ 135(ಸಿ) ರಂತೆ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಮತದಾನದ ಪ್ರಯುಕ್ತ, ಫೆ. 14 ಸಂಜೆ 5.00 ಗಂಟೆಯಿಂದ ಫೆ.17 ಬೆಳಗ್ಗೆ 6.00 ಗಂಟೆಯವರಗೆ ಬೆಂಗಳೂರು ನಗರ ಜಿಲ್ಲೆಯಾದ್ಯಂತ (ಪೊಲೀಸ್ ಕಮೀಷನರೇಟ್ ವ್ಯಾಪ್ತಿ ಹೊರತುಪಡಿಸಿ) ಪಾನನಿರೋಧ ದಿನ ಜಾರಿಗೊಳಿಸಲಾಗುತ್ತಿದೆ.

Latest Indian news

Popular Stories