ಬೆಂಗಳೂರು ಫೆಬ್ರವರಿ 14: ಆಸ್ತಿ ತೆರಿಗೆ ಪಾವತಿಸದೆ ಬಾಕಿ ಉಳಿಸಿಕೊಂಡಿರುವ ಕಾರಣ ನೀಡಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಮಾಲೀಕತ್ವದ ರಾಕ್ ಲೈನ್ ಮಾಲ್‌ಗೆ ಬೀಗ ಜಡಿದಿದ್ದಾರೆ.
ಸದ್ಯ ದಾಸರಹಳ್ಳಿಯಲ್ಲಿರುವ ರಾಕ್ ಲೈನ್ ಮಾಲ್‌ಗೆ ಬೀಗ ಹಾಕಲಾಗಿದೆ.ದಾಸರಹಳ್ಳಿ ವಲಯದ ಬಿಬಿಎಂಪಿ ಕಂದಾಯ ಅಧಿಕಾರಿಗಳು ನಿನ್ನೆ ತಡರಾತ್ರಿ ರಾಕ್ ಲೈನ್ ಮಾಲ್ ಬಳಿ ತೆರಳಿ ಪೊಲೀಸರು ಹಾಗೂ ಮಾರ್ಷಲ್ಸ್ ಸಮ್ಮುಖದಲ್ಲಿ ಸೀಜ್ ಮಾಡಿದ್ದಾರೆ.
ರಾಕ್ಲೈನ್ ಮಾಲ್ 2011 ರಿಂದ 2022-23 ರವರೆಗೆ ಒಟ್ಟು 11.51 ಕೋಟಿ ರೂಪಾಯಿ ತೆರಿಗೆ ಬಾಕಿ ಉಳಿಸಿಕೊಂಡಿದೆ ಎನ್ನಲಾಗಿದೆ. ಹಲವು ವರ್ಷದಿಂದ ಕೋಟ್ಯಾಂತರ ರೂಪಾಯಿ ತೆರಿಗೆ ಬಾಕಿ ಉಳಿಸಿಕೊಂಡ ಕಾರಣ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕಂದಾಯ ಅಧಿಕಾರಿಗಳು ಅನೇಕ ಬಾರಿ ನೋಟಿಸ್ ನೀಡಿದ್ದರು. ಆದರೆ ನೋಟಿಸ್ ನೀಡಿದರೂ ತೆರಿಗೆ ಹಣ ಪಾವತಿಸದ ಕಾರಣ ಸದ್ಯ ರಾಕ್ ಲೈನ್ ಮಾಲ್ ಸೀಜ್ ಮಾಡಲಾಗಿದೆ.
ದಾಸರಹಳ್ಳಿ ವಲಯದ ಬಿಬಿಎಂಪಿ ಆಯುಕ್ತೆ ಪ್ರೀತಿ ಗೆಹ್ಲೋಟ್, ವಲಯ ಜಂಟಿ ಆಯುಕ್ತರಾದ ಬಾಲಶೇಖರ್, ದಾಸರಹಳ್ಳಿ ವಲಯ ಅಧಿಕಾರಿಗಳು, ಕಂದಾಯ ಅಧಿಕಾರಿಗಳು, ಪೊಲೀಸ್ ಸಿಬ್ಬಂದಿ ಹಾಗೂ ಮಾರ್ಷಲ್‌ಗಳ ಸಮ್ಮುಖದಲ್ಲಿ ರಾಕ್ ಲೈನ್ ಮಾಲ್‌ಗೆ ಬೀಗ ಜಡಿಯಲಾಗಿದೆ.
ಯಲಹಂಕದಲ್ಲಿ 85 ಕೋಟಿ ಮೌಲ್ಯದ ಆಸ್ತಿಯ ಅಕ್ರಮ ಒತ್ತುವರಿ ತೆರವುಗೊಳಿಸಿದ ಬಿಬಿಎಂಪಿಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನಗರದ ಯಲಹಂಕದಲ್ಲಿ 75 ಎಕರೆ ಪ್ರದೇಶದಲ್ಲಿದ್ದ 85 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಆಸ್ತಿ ಒತ್ತುವರಿಯನ್ನು ತೆರವುಗೊಳಿಸಿದೆ. ಕಂದಾಯ ಇಲಾಖೆ ಹಾಗೂ ಪೊಲೀಸರ ಸಹಕಾರದೊಂದಿಗೆ ಬಿಬಿಎಂಪಿ ಮಂಗಳವಾರ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಲಾಗಿದೆ
ಬಿಬಿಎಂಪಿಯ ಯಲಹಂಕದಲ್ಲಿ 75 ಎಕರೆ ಪ್ರದೇಶದಲ್ಲಿದ್ದ 85 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಆಸ್ತಿಯನ್ನು ಅತಿಕ್ರಮಣಕಾರರು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದು.ಈ ಬಗ್ಗೆ ಪರಿಶೀಲನೆ ನಡೆಸಿ ವರದಿ ತಯಾರಿಸಲಾಗಿತ್ತು.ಅಲ್ಲದೇ ಸಂಬಂಧ ಪಟ್ಟವರಿಗೆ ನೋಟಿಸ್ ಮೂಲಕ ತಿಳಿಸಲಾಗಿತ್ತು.
ಅತಿಕ್ರಮಣಕಾರರು ಒತ್ತುವರಿ ಮಾಡಿಕೊಂಡ ಜಾಗದಲ್ಲಿ ತಾತ್ಕಾಲಿಕ ಶೆಡ್‌ಗಳನ್ನು ಹಾಕಿಕೊಂಡು ವಾಣಿಜ್ಯ ಸಂಸ್ಥೆಗಳನ್ನು ನಡೆಸುತ್ತಿದ್ದರು. ನಿನ್ನೆ 140 ಪೊಲೀಸ್ ಸಿಬ್ಬಂದಿ ಮತ್ತು 70 ಕಾರ್ಮಿಕರು ಒತ್ತುವರಿ ತೆರವು ಕಾರ್ಯಾಚರಣೆ ನಡೆಸಿದ್ದಾರೆ. ಇನ್ನು ಮುಂದೆ ಯಾವುದೇ ಒತ್ತುವರಿಯಾಗದಂತೆ ಚೈನ್ ಲಿಂಕ್ ಬೇಲಿ ಹಾಕಲು ಅಧಿಕಾರಿಗಳು ಮುಂದಾಗಿದ್ದಾರೆ.