Bengaluru Urban

ವಾರದಲ್ಲಿ ನಾಲ್ಕು ದಿನ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಿಗೆ ಮೊಟ್ಟೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಜುಲೈ 20: ಅಜೀಂ ಪ್ರೇಮ್ ಜಿ ಪ್ರತಿಷ್ಠನದೊಂದಿಗೆ ಮಾಡಿಕೊಂಡಿರುವ ಒಪ್ಪಂದದಲ್ಲಿ ವಾರದ ನಾಲ್ಕು ದಿನಗಳು ಸರ್ಕಾರಿ ಶಾಲೆಗಳು ಹಾಗೂ ಸರ್ಕಾರಿ ಅನುದಾನಿತ ಶಾಲೆಗಳಿಗೆ ಮೊಟ್ಟೆಯನ್ನು ಸರಬರಾಜು ಮಾಡಲು ಒಪ್ಪಿಕೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅಜೀಂಪ್ರೇಮ್ ಜಿ ಫೌಂಡೇಷನ್ ಸಹಭಾಗಿತ್ವದಲ್ಲಿ ಸರ್ಕಾರಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳಿಗೆ ವಾರದಲ್ಲಿ ಉಚಿತ 6 ದಿನ ಪೂರಕ ಪೌಷ್ಠಿಕ ಆಹಾರ ನೀಡುವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳು ಆರೋಗ್ಯವಂತರಾಗಿರಲು ಪೌಷ್ಟಿಕ ಆಹಾರ ಅಗತ್ಯ ಎಂದರು.

ಮಾನಸಿಕ ಆರೋಗ್ಯ ಮತ್ತು ಉತ್ತಮ‌ ಶಿಕ್ಷಣಕ್ಕೆ ಗುಣಮಟ್ಟದ ಆಹಾರ ಮುಖ್ಯ. ಉಪಹಾರ ಇಲ್ಲದೆ ಶಾಲೆಗೆ ಬಂದು, ಊಟ ಇಲ್ಲದೆ ಮಧ್ಯಾಹ್ನದವರೆಗೂ ಶಾಲೆಯಲ್ಲಿರುವ ಮಕ್ಕಳನ್ನು ನಾನು ನೋಡಿದ್ದೇನೆ. ಹೀಗಾಗಿ ವಾರದಲ್ಲಿ ಎರಡು ದಿನ ಊಟ ಮತ್ತು ಮೊಟ್ಟೆ ಕೊಡಲು ಮುಂದಾದೆವು. ಈಗ ಅಜೀಂ ಪ್ರೇಮ್ ಜಿ ಫೌಂಡೇಷನ್ ಅವರು ವಾರದಲ್ಲಿ ನಾಲ್ಕು ದಿನವೂ ಮಕ್ಕಳಿಗೆ ಮೊಟ್ಟೆ ನೀಡಲು ಮತ್ತು ಪೂರಕ ಪೌಷ್ಠಿಕ ಆಹಾರ ಒದಗಿಸುವ ಪುಣ್ಯದ ಕಾರ್ಯಕ್ಕೆ ಸರ್ಕಾರದ ಜೊತೆಗೆ ಕೈಜೋಡಿಸಿದ್ದಾರೆ ಎಂದರು.

ವೈಜ್ಞಾನಿಕವಾಗಿ, ವೈಚಾರಿಕವಾಗಿ ನೀವು ವಿಕಾಸ ಹೊಂದಬೇಕು. ಆಗ ಮಾತ್ರ ಸಮಾಜಮುಖಿ ಆಗುತ್ತೀರಿ ಎಂದು ಶಾಲಾ ಮಕ್ಕಳಿಗೆ ಕರೆ ನೀಡಿದರು. ಬಡವರ ಮಕ್ಕಳಿಗೂ ಉತ್ತಮ ಶಿಕ್ಷಣಕ್ಕಾಗಿ ಅವಕಾಶಗಳನ್ನು ಸೃಷ್ಟಿಸುವುದು ನಮ್ಮ ಆಶಯ. ಈ ಕಾರಣಕ್ಕೇ ಸಮವಸ್ತ್ರ, ಶೂ, ಸಾಕ್ಸ್ ಕೊಡುವ ಜೊತೆಗೆ ಹೆಚ್ಚೆಚ್ಚು ವಸತಿ ಶಾಲೆಗಳನ್ನು ತೆರೆಯುತ್ತಿದ್ದೇವೆ ಎಂದರು.

Related Articles

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button