ಮಾ.15ರವರೆಗೆ ಬೆಂಗಳೂರಲ್ಲಿ ‘ಟ್ಯಾಂಕ್ ನೋಂದಣೆ’ಗೆ ಅವಧಿ ವಿಸ್ತರಣೆ- BWSSB ಆದೇಶ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಪೋರ್ಟಲ್‍ನಲ್ಲಿ ಇದುವರೆಗೆ 1530 ಟ್ಯಾಂಕರ್ ಗಳು ನೋಂದಣಿಯಾಗಿದ್ದು, ಮಾ.15ರವರೆಗೆ ನೋಂದಣಿಗೆ ಕಾಲವಕಾಶ ನೀಡಲಾಗಿದೆ. ಅದಾದ ನಂತರವೂ ನೋಂದಣಿಯಾಗದಿದ್ದಲ್ಲಿ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ಜಲಮಂಡಳಿ ಮಂಡಳಿ ಅಧ್ಯಕ್ಷ ಡಾ.ವಿ.ರಾಮ್ ಪ್ರಸಾತ್ ಮನೋಹರ್ ಅವರು ತಿಳಿಸಿದರು.

ಈ 1530 ಟ್ಯಾಂಕರ್‌ಗಳಿಂದ ನಿತ್ಯ 10 ಎಂಎಲ್‍ಡಿ ನೀರನ್ನು ಒಂದೇ ಬಾರಿಗೆ ಸರಬರಾಜು ಮಾಡಬಹುದು. ನೋಂದಣಿಯಾದ ಟ್ಯಾಂಕರ್ ಗಳಿಗೆ ಸ್ಟಿಕ್ಕರ್ ಅಳವಡಿಸಲಾಗುವುದು; ಆ ಟ್ಯಾಂಕರ್ ಗಳು ನಿಗದಿಪಡಿಸಿದ ದರಕ್ಕಿಂತ ಹೆಚ್ಚು ಹಣಕ್ಕೆ ಬೇಡಿಕೆ ಇಟ್ಟಿರುವ ದೂರುಗಳು ಕೇಳಿಬಂದಲ್ಲಿ ಕ್ರಮಕೈಗೊಳ್ಳಲಾಗುವುದು. 419 ಜನರು ಸ್ವಯಂಪ್ರೇರಿತವಾಗಿ ಬಾಡಿಗೆಗೆ ತಮ್ಮ ಟ್ಯಾಂಕರ್ ಗಳನ್ನು ಮಂಡಳಿಗೆ ನೀಡಲು ಮುಂದೆ ಬಂದಿದ್ದಾರೆ ಎಂದು ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ನಗರದಲ್ಲಿ ಬೇಕಾಬಿಟ್ಟಿಯಾಗಿ ಬೊರವೆಲ್‍ಗಳನ್ನು ಕೊರೆಯುವುದರ ಬದಲು ನೀರಿನ ಲಭ್ಯತೆ ಆಧರಿಸಿ ಭೂವಿಜ್ಞಾನಿಗಳ ವರದಿಯ ಆಧಾರದ ಮೇಲೆ ಬೊರವೆಲ್‍ಗಳನ್ನು ಕೊರೆಯಿಸಲು ಮಂಡಳಿ ಉದ್ದೇಶಿಸಿದ್ದು,ಇದಕ್ಕಾಗಿ 4 ಜನ ಭೂವಿಜ್ಞಾನಿಗಳನ್ನು ಸಹ ತೆಗೆದುಕೊಳ್ಳಲಾಗಿದೆ ಎಂದರು.

Latest Indian news

Popular Stories