ಮಂಡ್ಯ :ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಮಂಡ್ಯದಲ್ಲಿ ನಡೆದಿದ್ದ ಹೆಣ್ಣುಭ್ರೂಣ ಪತ್ತೆ ಹಾಗೂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಅಭಿಷೇಕ್ ಬಂಧಿತ ಆರೋಪಿ. ಅಭಿಷೇಕ್ ಪಾಂಡವಪುರ ತಾಲೂಕಿನ ಎಂ.ಶೆಟ್ಟಿಹಳ್ಳಿ ನಿವಾಸಿ.
ಕಿಂಗ್ ಪಿನ್ ಅಭಿಷೇಕ್ ಜೊತೆ ವಿರೇಶ್ ಸೇರಿದಂತೆ 12 ಆರೋಪಿಗಳನ್ನು ಬಂಧಿಸಲಾಗಿದೆ.
ಹೆಣ್ಣುಭ್ರೂಣ ಪತ್ತೆ ಹಾಗೂ ಹತ್ಯೆ ಕೇಸ್ ನಲ್ಲಿ ವಿರೇಶ್ ಈಗಗಲೇ ಜೈಲು ಸೇರಿ ಜಾಮೀನು ಪಡೆದು ಹೊರಬಂದಿದ್ದ. ಬಂಧಿತರಿಂದ 2 ಸ್ಕ್ಯಾನಿಂಗ್ ಮಷಿನ್, 3 ಕಾರು, ಮೊಬೈಲ್ ಸೇರಿ 23 ಲಕ್ಷ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.
ಪ್ರಕರಣ ಬೇಧಿಸಲು ಪೊಲೀಸರ 7 ತಂಡ ರಚನೆ ಮಾಡಲಾಗಿತ್ತು. ಪ್ರಕರಣದಲ್ಲಿ ಭಾಗಿಯಾಗಿರುವ ವೈದ್ಯನ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದಾರೆ.