ಬೆಂಗಳೂರು: ಭಾರತ ಹಾಕಿ ತಂಡದ ಡಿಫೆಂಡರ್ ವರುಣ್ ಕುಮಾರ್ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಅಪ್ರಾಪ್ತ ಯುವತಿಗೆ ಮೋಸ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಕ್ಸ್ ಕಾಯ್ದೆಯಡಿ ಕೇಸ್ ದಾಖಲಾಗಿದೆ.
ವರುಣ್ ಕುಮಾರ್ ವಿರುದ್ಧ ಬೆಂಗಳೂರಿನ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.
ವರುಣ್ ಕುಮಾರ್ ಜ್ಞಾನಭಾರತಿ ಠಾಣಾ ವ್ಯಾಪ್ತಿಯಲ್ಲಿ ಇದ್ದಾಗ 17 ವರ್ಷದ ಯುವತಿಯನ್ನು ಪ್ರೀತಿಸಿದ್ದರು. ಅಲ್ಲದೇ ಮದುವೆಯಾಗುವುದಾಗಿ ಆಕೆಯನ್ನು ನಂಬಿಸಿ ದೈಹಿಕ ಸಂಪರ್ಕವನ್ನೂ ಹೊಂದಿದ್ದರು ಎಂಬ ಆರೋಪ ಕೇಳಿಬಂದಿದೆ. ಬಳಿಕ ಯುವತಿಯನ್ನು ಮದುವೆಯಾಗಲು ನಿರಾಕರಿಸಿದ್ದರು.
ಈ ಹಿಂದೆ ಕೂಡ ಯುವತಿ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ವರುಣ್ ವಿರುದ್ಧ ದೂರು ನೀಡಿದ್ದಳು. ಆದರೆ ಹಾಕಿ ಆಟಗಾರನ ಕರಿಯರ್ ಹಾಳಾಗಬಾರದು ಎಂಬ ಕಾರಣಕ್ಕೆ ಠಾಣೆಗೆ ಕರೆಸಿ ಪೊಲೀಸರು ವರುಣ್ ಹಾಗೂ ಯುವತಿಗೆ ರಾಜಿ ಮಾಡಿಸಿದ್ದರು. ಅದಾದ ಬಳಿಕ ಯುವತಿಯೊಂದಿಗೆ ವರುಣ್ ಸರಿಯಾಗಿಯೇ ಇದ್ದರು. ಕೆಲ ವರ್ಷಗಳಲ್ಲಿ ಮದುವೆಯಾಗುವುದಾಗಿಯೂ ಹೇಳಿದ್ದರು. ಆದರೆ ಈಗ ಯುವತಿ ಮತ್ತೆ ಮದುವೆಗೆ ಪ್ರಸ್ತಾಪಿಸಿದರೆ ವರುಣ್ ಮದುವೆಗೆ ಒಪ್ಪುತ್ತಿಲ್ಲ. ಈ ಹಿನ್ನೆಲೆಯಲ್ಲಿ ಯುವತಿ ಜ್ಞಾನಭಾರತಿ ಠಾಣೆಯಲ್ಲಿ ವರುಣ್ ಕುಮಾರ್ ವಿರುದ್ಧ ಪ್ರಕರಣ ದಾಖಲಿಸಿದ್ದಾಳೆ.