ಪರ್ಫ್ಯೂಮ್ ಗೋಡೌನ್ ನಲ್ಲಿ ಅಗ್ನಿ ಅವಘಡ ಪ್ರಕರಣ : ಮತ್ತೋರ್ವ ಬಾಲಕ ಸಾವು, ಮೃತರ ಸಂಖ್ಯೆ ಐದಕ್ಕೇರಿಕೆ

ಬೆಂಗಳೂರು: ಪರ್ಫ್ಯೂಮ್ ಗೋಡೌನ್ನಲ್ಲಿ ಅಗ್ನಿ ಅವಘಡ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಬಾಲಕ ಸಾವನ್ನಪ್ಪಿದ್ದು, ಮೃತರ ಸಂಖ್ಯೆ ಐದಕ್ಕೇರಿಕೆಯಾಗಿದೆ.

ಕಳೆದ ನಾಲ್ಕು ದಿನಗಳಿಂದ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಿಯಾನ್ (10) ತಡರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.
ಇದಕ್ಕೂ ಮುನ್ನ, ಸಾಜಿದ್ (15) ಮೃತಟ್ಟಿದ್ದನು. ಈ ಮೂಲಕ ಅಗ್ನಿ ಅವಘಡದಲ್ಲಿ ಮೃತಪಟ್ಟವರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.

ಕಳೆದ ನಾಲ್ಕು ದಿನಗಳಿಂದ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಿಯಾನ್ ಹಾಗೂ ಸಾಜಿದ್ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಬೆಂಗಳೂರು ದಕ್ಷಿಣ ತಾಲೂಕಿನ ರಾಮಸಂದ್ರದಲ್ಲಿ ಪರ್ಫ್ಯೂಮ್ ಫ್ಯಾಕ್ಟರಿಯಲ್ಲಿ ಮೂರು ದಿನಗಳ ಹಿಂದೆ ಭೀಕರ ಬೆಂಕಿ ದುರಂತ ಸಂಭವಿಸಿತ್ತು. ಘಟನೆಯಲ್ಲಿ ಮೂವರು ಸಜೀವದಹನವಾಗಿದ್ದರು. ಹಲವರು ಗಾಯಗೊಂಡಿದ್ದರು. ಇದೀಗ ಅವಘಡದಲ್ಲಿ ಮೃತಪಟ್ಟವರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.

Latest Indian news

Popular Stories