ಎತ್ತಿನಹೊಳೆ ಯೋಜನೆಗೆ 500 ಎಕರೆ ಜಾಗ ನೀಡಲು ಅರಣ್ಯ ಇಲಾಖೆ ಒಪ್ಪಿಗೆ : ಡಿಸಿಎಂ ಡಿಕೆಶಿ

ಬೆಂಗಳೂರು: ಎತ್ತಿನಹೊಳೆ ಯೋಜನೆಗೆ 500 ಎಕರೆ ಜಾಗ ನೀಡಲು ಅರಣ್ಯ ಇಲಾಖೆ ಒಪ್ಪಿಗೆ ನೀಡಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.

ಈ ಬಗ್ಗೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್ ಎತ್ತಿನಹೊಳೆ ಕಾಮಗಾರಿಗೆ ಅಡ್ಡಿಯಾಗಿರುವ 500 ಎಕರೆ ಜಾಗವನ್ನು ಹಸ್ತಾಂತರಿಸಲು ಅರಣ್ಯ ಇಲಾಖೆ ಒಪ್ಪಿದ್ದು, ಪರ್ಯಾಯವಾಗಿ ಕಂದಾಯ ಇಲಾಖೆಯು 500 ಎಕರೆ ಜಾಗವನ್ನು ಅರಣ್ಯ ಇಲಾಖೆಗೆ ನೀಡಲಿದೆ.

ಜಾಗವನ್ನು ಹಸ್ತಾಂತರಿಸುವ ಪ್ರಕ್ರಿಯೆಯನ್ನು ಕಾನೂನು ಚೌಕಟ್ಟಿನಲ್ಲಿ ಪೂರ್ಣಗೊಳಿಸುತ್ತೇವೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

Latest Indian news

Popular Stories