ಪರಪ್ಪನ ಅಗ್ರಹಾರ ಜೈಲಿನಿಂದ ಮಾಜಿ ಸಚಿವ `ಬಿ.ನಾಗೇಂದ್ರ’ ಬಿಡುಗಡೆ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಂತಹ ಕೋಟ್ಯಾಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ ನಾಗೇಂದ್ರ ಅವರಿಗೆ ಬೆಂಗಳೂರಿನ 82ನೇ ಸಿಟಿ ಸಿವಿಲ್ ಕೋರ್ಟ್ ಜಾಮೀನು ಮಂಜೂರು ಮಾಡಿದ್ದು,ಇಂದು ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆ ಆಗಿದ್ದಾರೆ.

82ನೇ ಸಿಟಿ ಸಿವಿಲ್ ಕೋರ್ಟ್ ಮಾಜಿ ಸಚಿವ ಬಿ ನಾಗೇಂದ್ರ ಅವರಿಗೆ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಾಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಬಿ.ನಾಗೇಂದ್ರ ಅವರನ್ನು ಬಂಧಿಸಿದ್ದರು.ಪ್ರಕರಣಕ್ಕೆ ಸಂಬಂಧಪಟ್ಟಂತೆ ಈ ಒಂದು ಹಗರಣದಲ್ಲಿ ಮಾಜಿ ಸಚಿವ ಬಿ ನಾಗೇಂದ್ರ ಪ್ರಮುಖ ಆರೋಪಿಯಾಗಿದ್ದಾರೆ ಎಂದು ಇಡಿ ಅಧಿಕಾರಿಗಳು ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಿ ಕೋರ್ಟಿಗೆ ಸಲ್ಲಿಸಿದರು.

ಬಳಿಕ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ನಂತರ ಇಡಿ ಅಧಿಕಾರಿಗಳು ಇತ್ತೀಚಿಗೆ ಸಚಿವ ಬಿ ನಾಗೇಂದ್ರ ಸೇರಿದಂತೆ ಈ ಒಂದು ಪ್ರಕರಣದಲ್ಲಿ ಭಾಗಿಯಾದಂತಹ ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಕೂಡ ಸಲ್ಲಿಸಿದ್ದರು.ಆದರೆ ಇಂದು ಬೆಂಗಳೂರಿನ 82ನೇ ಸಿಟಿ ಸಿವಿಲ್ ಕೋರ್ಟ್ ನ್ಯಾಯಾಲಯವು ಮಾಜಿ ಸಚಿವ ಬಿ ನಾಗೇಂದ್ರಗೆ ಜಾಮೀನು ಮಂಜೂರು ನೀಡಿ ಆದೇಶ ಹೊರಡಿಸಿದ್ದು, ಇಂದು ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆ ಆಗಿದ್ದಾರೆ.

Latest Indian news

Popular Stories