ತಿರುಪತಿಗೆ ತೆರಳುತ್ತಿದ್ದ ಕಾರು ಉರುಳಿ ಬಿದ್ದು ಒಂದೇ ಕುಟುಂಬದ ನಾಲ್ವರ ಸಾವು

ರಾಣಿಬೆನ್ನೂರು. ಮೇ24- ತಿರುಪತಿಗೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕ ಉರುಳಿ ಬಿದ್ದ ಪರಿಣಾಮ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿ ಆರು ಮಂದಿ ಗಂಭಿರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ಹಲಗೇರಿ ಬೈಪಾಸ್‌‍ ನಲ್ಲಿ ತಡರಾತ್ರಿ ನಡೆದಿದೆ.

ಹಾವೇರಿ ಪಟ್ಟಣದ ಅಶ್ವಿನಿನಗರದ ನಿವಾಸಿಗಳಾದ ಸುರೇಶ್‌(45) ಐಶ್ವರ್ಯ(22) ಪ್ರಮೀಳಾ (28) ಹಾಗೂ ಚೇತನಾ(7) ಮೃತಪಟ್ಟ ದುರ್ದೈವಿಗಳೆಂದು ಗುರುತಿಸಲಾಗಿದೆ. ಇವರೆಲ್ಲರೂ ತಿರುಪತಿ ತಿಮ್ಮಪ್ಪನ ದರ್ಶನಕ್ಕೆಂದು ಹಾವೇರಿಯಿಂದ ಕಾರಿನಲ್ಲಿ ತೆರಳುತ್ತಿದ್ದಾಗ ರಾತ್ರಿ 12, 45 ರ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾಗಿ ಈ ಅವಘಡ ಸಂಭವಿಸಿದೆ ಎನ್ನನಾಗಿದೆ, ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಗಾಯಾಳುಗಳನ್ನು ಚಿಕಿತ್ಸೆಗಾಗಿ ದಾವಣಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸುದ್ದಿ ತಿಳಿಯುತ್ತಿದ್ದಂತೆ ರಾಣಿಬೆನ್ನೂರು ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ಭೀಕರ ಅಫಘಾತದಲ್ಲಿ ತಮವರನ್ನು ಕಳೆದು ಕೊಂಡು ಕುಟುಂಬ ಸದಸ್ಯರ ಆಕಂದ್ರನ ಮುಗಿಲು ಮುಟ್ಟಿತ್ತು.

Latest Indian news

Popular Stories