ಇನ್ಮುಂದೆ ಮಗುವಿಗೆ 6 ವರ್ಷತುಂಬಿದ್ರೆ ಮಾತ್ರ 1ನೇ ತರಗತಿಗೆ ಪ್ರವೇಶ! 2025-26ನೇ ಶೈಕ್ಷಣಿಕ ವರ್ಷದಿಂದಲೇ ನಿಯಮ ಜಾರಿ

ಬೆಂಗಳೂರು: “2025-26ನೇ ಶೈಕ್ಷಣಿಕ ~ ಸಾಲಿನಿಂದ ಅನ್ವಯವಾಗುವಂತೆ ಜೂನ್ ಒಂದನೇ ತಾರೀಕಿಗೆ 2025-26ನೇ ಪೂರ್ಣಗೊಂಡಿರುವ ಮಗುವನ್ನು ಒಂದನೇ ತರಗತಿಗೆ ದಾಖಲಿಸಲು ವಯೋಮಿತಿಯನ್ನು ನಿಗದಿಪಡಿಸಿ ಆದೇಶಿಸಿದೆ.ಆದೇಶವನ್ನು ಕಳೆದ ವರ್ಷವೇ ಶಿಕ್ಷಣ ಇಲಾಖೆ ಆದೇಶ ಹೊರಡಿಸಿತ್ತು,ಈಗ ಮತ್ತೆ ಪೋಷಕರ ಮಾಹಿತಿಗಾಗಿ ಮತ್ತೊಮ್ಮೆ ಮಾಹಿತಿಯನ್ನು ನಿಮ್ಮೊಂದಿಗೆ ಹಂಚಿಕೊಳ್ಳಲಾಗುತ್ತಿದೆ.

ಆರ್ ಟಿ ಇ ಕಾಯಿದ 2009 ಮತ್ತು ಕಡ್ಡಾಯ ಶಿಕ್ಷಣ ನಿಯಮಗಳು 2012 ರಂತ 2025-26ನೇ ಶೈಕ್ಷಣಿಕ ಸಾಲಿನಿಂದ ಅನ್ವಯವಾಗುವಂತೆ ಜೂನ್ 1ನೇ ತಾರೀಖಿಗೆ ಕಡ್ಡಾಯವಾಗಿ 6 ವರ್ಷಗಳು ಪೂರ್ಣಗೊಂಡಿರುವ ಮಗುವನ್ನು ಒಂದನೇ ತರಗತಿಗೆ ದಾಖಲಿಸಲು ವಯೋಮಿತಿಯನ್ನು ನಿಗದಿ ಪಡಿಸಿ ಉಲ್ಲೇಖ-2 ರನ್ವಯ ತಿದ್ದುಪಡಿ ಆದೇಶ ಹೊರಡಿಸಿರುತ್ತದೆ.

ಅದರಂತೆ ಕ್ರಮವಹಿಸಲು ಇಲಾಖೆಯ ಎಲ್ಲಾ ಸಂಬಂಧಿಸಿದ ಅಧಿಕಾರಿಗಳಿಗೆ ಹಾಗೂ ಶಾಲಾ ಮುಖ್ಯಸ್ಥರಿಗೆ ತಿಳಿಸಲಾಗಿದೆ. ಸರ್ಕಾರದ ಆದೇಶ ಸಂಖ್ಯೆ: ಇಪಿ 260 ಪಿಜಿಸಿ 2021, ದಿನಾಂಕ 26.07.2022ರ ಆದೇಶ ಭಾಗದ 3ನೇ ಸಾಲಿನಲ್ಲಿ “ಶೈಕ್ಷಣಿಕ ವರ್ಷದ ಜೂನ್ ಒಂದನೇ ತಾರೀಖಿಗೆ ಕಡ್ಡಾಯವಾಗಿ 06 ವರ್ಷಗಳು ಪೂರ್ಣಗೊಂಡಿರುವ ಮಗುವನ್ನು ಒಂದನೇ ತರಗತಿಗೆ ದಾಖಲಿಸಲು ವಯೋಮಿತಿಯನ್ನು ನಿಗದಿಪಡಿಸಿ” ಆದೇಶಿಸಿದೆ ಎಂಬುದನ್ನು “2025-26ನೇ ಶೈಕ್ಷಣಿಕ ಸಾಲಿನಿಂದ ಅನ್ವಯವಾಗುವಂತೆ ಜೂನ್ ಒಂದನೇ ತಾರೀಖಿಗೆ ಕಡ್ಡಾಯವಾಗಿ 06 ವರ್ಷಗಳು ಪೂರ್ಣಗೊಂಡಿರುವ ಮಗುವನ್ನು ಒಂದನೇ ತರಗತಿಗೆ ದಾಖಲಿಸಲು ವಯೋಮಿತಿಯನ್ನು ನಿಗದಿಪಡಿಸಿ ಆದೇಶಿಸಿದ ಎಂದು ತಿದ್ದಿ ಓದಿಕೊಳ್ಳತಕ್ಕದ್ದು.

ಉಳಿದಂತೆ ಸರ್ಕಾರದ ಆದೇಶ ಸಂಖ್ಯೆ: ಇಪಿ 260 ಪಿಜಿಸಿ 2021, ದಿನಾಂಕ 26.07.2022ರಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಅಂತ ಇದೇ ವೇಳೆ ತಿಳಿಸಿದೆ. ಆಯುಕ್ತರು, ಸಾರ್ವಜನಿಕ ಶಿಕ್ಷಣ ಇಲಾಖೆ ಇವರು ದಿನಾಂಕ:18.01.2017ರ ಜ್ಞಾಪನವನ್ನು ಮಾರ್ಪಡಿಸಿ ಶೈಕ್ಷಣಿಕ ವರ್ಷ 2018-19ನೇ ಸಾಲಿನಿಂದ ಸರ್ಕಾರಿ, ಅನುದಾನಿತ, ಅನುದಾನ ರಹಿತ ಶಾಲೆಗಳಲ್ಲಿ 1ನೇ ತರಗತಿಗೆ ನೇರವಾಗಿ ದಾಖಲಾಗುವ ಮಗುವು ಸಂಬಂಧಿಸಿದ ಶೈಕ್ಷಣಿಕ ವರ್ಷದ ಜೂನ್ 1 ರಂದು 5 ವರ್ಷ, 10 ತಿಂಗಳು ಪೂರ್ಣಗೊಂಡಿರಬೇಕೆಂದು ಮೇಲೆ ಓದಲಾದ (3)ರ ಜ್ಞಾಪನದಲ್ಲಿ ನಿಗಧಿಪಡಿಸಲಾಗಿದೆ.

2009ರಲ್ಲಿ ಆರ್.ಟಿ.ಇ. ಕಾಯ್ದೆ ಮತ್ತು 2012 ರಲ್ಲಿ ಕಡ್ಡಾಯ ಶಿಕ್ಷಣ ನಿಯಮಗಳು ಜಾರಿಗೆ ಬಂದಿದ್ದು. ಇವುಗಳು ಕರ್ನಾಟಕ ಶಿಕ್ಷಣ ಕಾಯ 1983 ಮತ್ತು ಅದರಡಿ ರಚಿತವಾದ ಎಲ್ಲಾ ನಿಯಮಗಳನ್ನು | ಆದೇಶಗಳನ್ನು ನಿರಸನಗೊಳಿಸುತ್ತದೆ (Overruled). ಆದ್ದರಿಂದ, ಆರ್.ಟಿ.ಇ. ಕಾಯ್ದೆ 2009 ಮತ್ತು ಕಡ್ಡಾಯ ಶಿಕ್ಷಣ ನಿಯಮಗಳು 2012ರಂತೆ ಪ್ರಾಥಮಿಕ ಶಾಲೆಗೆ ದಾಖಲಿಸಲು ಮಗುವಿನ ಕನಿಷ್ಠ ವಯಸ್ಸನ್ನು ನಿಗಧಿಪಡಿಸುವುದು ಅಗತ್ಯವಾಗಿರುತ್ತದ ಅಂತ ತಿಳಿಸಿದೆ.

Latest Indian news

Popular Stories