
Bengaluru UrbanDakshina Kannada
ಧರ್ಮ ಯಾವುದಾದರೇನು ಎಲ್ಲರಿಗೂ ಕಾನೂನು ಒಂದೇ : ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ
ಬೆಂಗಳೂರು: ಯಾವುದೇ ಧರ್ಮಕ್ಕೆ ಸೇರಿದರೂ ಕಾನೂನು ಒಂದೇ , ಎಲ್ಲರಿಗೂ ಒಂದೇ ರೀತಿ ಶಿಕ್ಷೆಯಾಗುತ್ತದೆ ಬೇದಭಾವ ಇಲ್ಲ ಧರ್ಮದಲ್ಲಿ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ.
ಹುಲಿ ಉಗುರು ಪ್ರಕರಣದಲ್ಲಿ ಹಿಂದೂಗಳನ್ನೇ ಟಾರ್ಗೆಟ್ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಹಿನ್ನೆಲೆ ಗೃಹ ಸಚಿವ ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು ಎಲ್ಲಾ ಜಾತಿಯವರಿಗೆ ಒಂದೇ ರೂಲ್ಸ್ ಯಾವ ಧರ್ಮದವರು ತಪ್ಪು ಮಾಡಿದ್ರು ಅದು ತಪ್ಪೇ ಕಾನೂನಿನಡಿ ಕ್ರಮ ತೆಗೆದುಕೊಳ್ತೇವೆಂದು ಅರಣ್ಯ ಸಚಿವರೇ ಹೇಳಿದ್ದಾರೆ ಎಂದು ಬೆಂಗಳೂರಿನಲ್ಲಿ ಗೃಹ ಇಲಾಖೆ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.ಹುಲಿ ಉಗುರು ಕೇಸ್ನಲ್ಲಿ ಹಿಂದೂಗಳ ಟಾರ್ಗೆಟ್ ಮಾಡಲಾಗ್ತಿದೆ’ ಎಂದು ಅರವಿಂದ ಬೆಲ್ಲದ್ ಆರೋಪ ಮಾಡಿದ್ದರು.
ವನ್ಯಜೀವಿಗಳ ಚರ್ಮ ಹುಲಿಯ ಉಗುರು ಧರಿಸುವುದು ಕಾನೂನು ಉಲ್ಲಂಘನೆಯಾಗಿದ್ದು, 1972ರ ವನ್ಯಜೀವಿಗಳ ಸಂರಕ್ಷಣಾ ಕಾಯ್ದೆ ಉಲ್ಲಂಘನೆ ಆಗುತ್ತದೆ . ವನ್ಯಜೀವಿಗಳ ಚರ್ಮ ಉಗುರು ಬಳಕೆ ಮಾಡುವುದು ನಿಷೇಧವಿದೆ ಎಂದರು.




