ಗಣೇಶ ಮೂರ್ತಿ ವಿಸರ್ಜನೆ: ಸೆ.31 ರವರೆಗೆ ನಗರದ ಹಲವೆಡೆ ಮದ್ಯ ಮಾರಾಟ ನಿಷೇಧ!

ಬೆಂಗಳೂರು: ದೇಶದಲ್ಲೆಡೆ ಗಣೇಶ ಚತುರ್ಥಿ ಹಬ್ಬವನ್ನು ವಿಜೃಂಭಣೆಯಿಂದ ನಡೆಸಲಾಗುತ್ತಿದ್ದು, ಅದರಂತೆ ಬೆಂಗಳೂರಿನ ಹಲವೆಡೆ ಇಂದು ಗಣೇಶ ವಿಸರ್ಜನೆ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಕೇಂದ್ರ, ಉತ್ತರ, ಪೂರ್ವ ಹಾಗೂ ಈಶಾನ್ಯ ವಿಭಾಗದಲ್ಲಿ ಮದ್ಯ ನಿಷೇಧ ಮಾಡಲಾಗಿದೆ.

ನಗರದಲ್ಲಿ ಗಣಪತಿ ವಿಸರ್ಜನೆ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗೃತ ಕ್ರಮವಾಗಿ ಪೊಲೀಸ್​ ಇಲಾಖೆ ಈ ಕ್ರಮ ಕೈಗೊಂಡಿದೆ.

ಬೆಂಗಳೂರು ಉತ್ತರ ವಿಭಾಗದ ಜೆ.ಸಿ.ನಗರ, ಆರ್.ಟಿ.ನಗರ, ಹೆಬ್ಬಾಳ, ಸಂಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೆ.21ರ ಬೆಳಗ್ಗೆ 6ರಿಂದ ಸೆ.22ರ ಬೆಳಗ್ಗೆ 6ರವರೆಗೆ ಮದ್ಯ ಮಾರಾಟ ನಿಷೇಧ ಮಾಡಲಾಗಿದೆ.

ಪೂರ್ವ ವಿಭಾಗದ ಡಿ.ಜೆ.ಹಳ್ಳಿ, ಭಾರತಿನಗರ, ಪುಲಿಕೇಶಿನಗರ ಠಾಣಾ ವ್ಯಾಪ್ತಿಯಲ್ಲಿ ಸೆಪ್ಟೆಂಬರ್ 23ರ ಬೆಳಗ್ಗೆ 6ರಿಂದ ಸೆ.24ರ ಬೆಳಗ್ಗೆ 6ವರೆಗೆ ಮದ್ಯ ನಿಷೇಧಿಸಲಾಗಿದೆ.

ಪೂರ್ವ ವಿಭಾಗದ ಕಮರ್ಷಿಯಲ್ ಸ್ಟ್ರೀಟ್, ಹಲಸೂರು, ಶಿವಾಜಿನಗರದಲ್ಲಿ ಸೆಪ್ಟೆಂಬರ್ 24ರ ಬೆಳಗ್ಗೆ 6ರಿಂದ ಸೆ.25ರ ಬೆಳಗ್ಗೆ 6ವರೆಗೆ ಮದ್ಯ ನಿಷೇಧ ಮಾಡಲಾಗಿದೆ.

ಇನ್ನುಳಿದಂತೆ ಬೆಂಗಳೂರಿನ ಈಶಾನ್ಯ ವಿಭಾಗದ ವಿದ್ಯಾರಣ್ಯಪುರ, ಯಲಹಂಕ, ಕೊಡಿಗೆಹಳ್ಳಿ, ಯಲಹಂಕ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೆಪ್ಟೆಂಬರ್ 23ರ ಸಂಜೆ 6ರಿಂದ ಸೆ.25ರ ಬೆಳಗ್ಗೆ 6 ಗಂಟೆವರೆಗೆ ಮದ್ಯ ನಿಷೇಧ ಮಾಡಲಾಗಿದೆ. ಇನ್ನು ಕೇಂದ್ರ ವಿಭಾಗದ ಹೈಗ್ರೌಂಡ್ಸ್ ಠಾಣಾ ವ್ಯಾಪ್ತಿಯಲ್ಲಿ ಸೆ.30ರ ಬೆಳಗ್ಗೆ 6ರಿಂದ ಅಕ್ಟೋಬರ್ 1ರ ಬೆಳಗ್ಗೆ 6ರವರೆಗೆ ಮದ್ಯ ನಿಷೇಧಿಸಲಾಗಿದೆ.

Latest Indian news

Popular Stories