ಬೆಂಗಳೂರು :ನಗರದ ಗ್ಯಾರೇಜ್ ವೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡ ಪರಿಣಾಮ ನಾಲ್ವರು ಗಾಯಗೊಂಡಿರೋ ಘಟನೆ ನಡೆದಿದೆ. ಅಲ್ಲದೇ ಗ್ಯಾಸ್ ಸಿಲಿಂಡರ್ ಸ್ಪೋಟದಿಂದ ಉಂಟಾದಂತ ಭಾರೀ ಶಬ್ದರಿಂದ ಅಕ್ಕಪಕ್ಕದ ಜನರು ಬೆಚ್ಚಿ ಬಿದ್ದಿದ್ದಾರೆ.
ಬೆಂಗಳೂರಿನ ಬಸವೇಶ್ವರ ನಗರದಲ್ಲಿರುವಂತ ಗ್ಯಾರೇಜ್ ನಲ್ಲಿ ವೇಲ್ಡಿಂಗ್ ಮಾಡುವಂತ ಸಂದರ್ಭದಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡಿದೆ.ಈ ಘಟನೆಯಲ್ಲಿ ಸ್ವಿಫ್ಟ್ ಡಿಸೈರ್ ಕಾರು, ದ್ವಿಚಕ್ರ ವಾಹನ ಸಂಪೂರ್ಣ ಹಾನಿಯಾಗಿದೆ.
ಈ ಗ್ಯಾಸ್ ಸಿಲಿಂಡರ್ ಸ್ಪೋಟದಲ್ಲಿ ಗ್ಯಾರೇಜ್ ಮಾಲೀಕ ಜಾರ್ಜ್, ಕೆಲಸಗಾರ ಶಿವು ಸೇರಿದಂತೆ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಈ ವಿಷಯ ತಿಳಿದು ಬೆಂಗಳೂರಿನ ಪಶ್ಚಿಮ ವಿಭಾಗದ ಡಿಸಿಪಿ ಎಸ್ ಗಿರೀಶ್ ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಸಿ ಮಾಹಿತಿ ಪಡೆದರು. ಈ ಸಂಬಂಧ ಮಾಗಡಿ ರಸ್ತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.