ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಹೈಕೋರ್ಟ್ ಮತ್ತೆ ನಾಲ್ವರು ಆರೋಪಿಗಳಿಗೆ ಷರತ್ತು ಬದ್ಧ ಜಾಮೀನು ನೀಡಿದೆ.ಆ ಮೂಲಕ 18 ಆರೋಪಿಗಳ ಪೈಕಿ ಒಟ್ಟು 8 ಆರೋಪಿಗಳಿಗೆ ಜಾಮೀನು ನೀಡಿದಂತಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇದೇ ಆರೋಪದ ಮೇಲೆ ಇತ್ತೀಚಿಗೆ ಅಮಿತ್ ದಿಗ್ವೇಕರ್, ಹೆಚ್ ಎಲ್ ಸುರೇಶ್, ಎನ್ ಮೋಹನ್ ನಾಯಕ್ ಮತ್ತು ಕೆ ಟಿ ನವೀನ್ ಕುಮಾರ್ ಜಾಮೀನು ಪಡೆದಿದ್ದರು.
ಇವರ ವಿರುದ್ಧ ಗೌರಿ ಲಂಕೇಶ್ ಕೊಲೆಗೆ ವಾಹನ, ಶಸ್ತ್ರಾಸ್ತ್ರ ಪೂರೈಕೆ ಇತ್ಯಾದಿ ಮೂಲಕ ಪಿತೂರಿ ನಡೆಸಿರುವ ಆರೋಪವಿತ್ತು.
ಇದೀಗ ಪ್ರಕರಣದಲ್ಲಿ 6ನೇ ಆರೋಪಿಯಾಗಿರುವ ಬೆಳಗಾವಿಯ ಭರತ್ ಜಯವಂತ್ ಕುರಾನೆ, 9ನೇ ಆರೋಪಿ ಮಹಾರಾಷ್ಟ್ರದ ಸತಾರದ ಸುಧನ್ವ ಗೊಂಧಾಲೇಕರ್, 13ನೇ ಆರೋಪಿ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದ ಸುಜಿತ್ ಕುಮಾರ್, 16ನೇ ಆರೋಪಿ ಮಹಾರಾಷ್ಟ್ರದ ಔರಂಗಾಬಾದ್‌ನ ಶ್ರೀಕಾಂತ್ ಪಂಗಾರ್ಕರ್ ಸಲ್ಲಿಸಿದ್ದ ಜಾಮೀನು ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್ ವಿಶ್ವಜಿತ್ ಶೆಟ್ಟಿ ಅವರಿದ್ದ ಏಕ ಸದಸ್ಯ ಪೀಠ ಈ ಆದೇಶ ನೀಡಿದೆ.